Breaking News

ರಾಜ್ಯದಲ್ಲಿ KPSC ಆಯ್ತು, ಇದೀಗ KSOU ಸರದಿ – ಹಣ ಕೊಟ್ರೆ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ

Spread the love

ಶಿವಮೊಗ್ಗ: ರಾಜ್ಯದಲ್ಲಿ ಕೆಪಿಎಸ್‌ಸಿ  ವಿವಾದದ ಬಳಿಕ ಇದೀಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ  ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಅಕ್ರಮವೊಂದು ಬೆಳಕಿಗೆ ಬಂದಿದ್ದು, ಹಣ ಕೊಟ್ಟರೇ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕೆಎಸ್‌ಓಯು ಶಿವಮೊಗ್ಗ  ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ನೇತೃತ್ವದಲ್ಲಿ ಹಣ ಪಡೆದು ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಮಾಡಿಸುತ್ತಿರುವ ಕರಾಳ ದಂಧೆ ಬಟಾಬಯಲಾಗಿದೆ.

ಇಲ್ಲಿ ಹಣ ಕೊಟ್ಟರೆ ಸಾಕು, ಪರೀಕ್ಷೆ ಕೂಡ ತುಂಬಾ ಸಲೀಸಾಗಲಿದೆ. ಹಣ ಕೊಟ್ಟು ಪರೀಕ್ಷೆಯನ್ನು ಹೇಗೆ ಬೇಕಾದರೂ ಬರೆಯಬಹುದು, ನಿಮ್ಮನ್ನು ಕೇಳುವವರು ಯಾರೂ ಇಲ್ಲ ಎಂಬ. ಹಣ ಕೊಟ್ಟವರಿಗೆ ಪುಸ್ತಕ ಮತ್ತು ಮೊಬೈಲ್ ಇಟ್ಟುಕೊಂಡೇ ಪರೀಕ್ಷೆ ಬರೆಯಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಣ ನೀಡಿದವರಿಗೆ ಎರಡನೇ ಫ್ಲೋರ್‌ನಲ್ಲಿ ಪರೀಕ್ಷೆ ಬರೆಯಲು ಸಕಲ ವ್ಯವಸ್ಥೆ ಮಾಡಲಾಗುತ್ತಿದ್ದರೆ, ಹಣ ನೀಡದವರಿಗೆ ಮೊದಲ ಫ್ಲೋರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

ಇದಕ್ಕೆ ಸಂಬAಧಿಸಿದAತೆ ವಿದ್ಯಾರ್ಥಿಗಳು ಪುಸ್ತಕ ಹಾಗೂ ಮೊಬೈಲ್ ನೋಡಿ ಪರೀಕ್ಷೆ ಬರೆಯುತ್ತಿರುವ ವಿಡಿಯೋ ಸಾಕ್ಷ್ಯ ಕೂಡ `ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ. ಸಿಬ್ಬಂದಿಯನ್ನು ಮುಂದೆ ಬಿಟ್ಟು ಹಣ ಸಂಗ್ರಹಿಸಿ, ಮುಕ್ತವಾಗಿ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ.

ಪರೀಕ್ಷೆ ಆರಂಭವಾದ ಅರ್ಧ ಗಂಟೆ ಬಳಿಕ ವಿದ್ಯಾರ್ಥಿಗಳ ಲೆಕ್ಕ ಮಾಡಲು ಪ್ರಾದೇಶಿಕ ನಿರ್ದೇಶಕ ಸ್ವಾಮಿ ಅವರು ಬರುತ್ತಿದ್ದರು. ಅದೇ ಸಮಯದಲ್ಲಿ ಪರೀಕ್ಷಾ ಕೇಂದ್ರದ ಪ್ರತ್ಯೇಕ ಕೊಠಡಿಯಲ್ಲಿ ಖುದ್ದಾಗಿ ನಿಂತು ಅವರು ಸಾಮೂಹಿಕ ನಕಲು ಮಾಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಳಿಕ ಎಸ್ ಡಿಸಿಗಳಾದ ವಿನಯಾ ಕೆ.ಜೆ., ನಿಂಗಾ ನಾಯ್ಕ್, ಅಟೆಂಡರ್ ಯೋಗೇಶ್ ಗೌಡ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹರೀಶ್ ಅವರನ್ನು ಮುಂದೆ ಬಿಟ್ಟು ಹಣ ವಸೂಲಿ ಮಾಡಿಸಲಾಗುತ್ತದೆ.

ಒಂದು ವಿಷಯಕ್ಕೆ ಒಂದು ಸಾವಿರ ರೂ.ನಂತೆ ಓರ್ವ ವಿದ್ಯಾರ್ಥಿಯಿಂದ ಹಣ ವಸೂಲಿ ಮಾಡುತ್ತಿರುವ ಆರೋಪವಿದ್ದು, ಪ್ರತಿನಿತ್ಯ 70 ರಿಂದ 100 ವಿದ್ಯಾರ್ಥಿಗಳ ಬಳಿ ಪರೀಕ್ಷೆ ಮುಗಿದ ಬಳಿಕ ಹಣ ವಸೂಲಿ ಮಾಡಲಾಗುತ್ತಿದೆ. ಪರೀಕ್ಷೆ ಬರೆದ ನಂತರ ಅಲ್ಲೇ ವಿದ್ಯಾರ್ಥಿಗಳಿಂದ ಫೋನ್ ಪೇ ಅಥವಾ ಗೂಗಲ್ ಪೇ ಮಾಡಿಸಿಕೊಳ್ಳಲಾಗುತ್ತಿದೆ. ಈ ಮೂಲಕ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳ ಶ್ರಮವನ್ನು ನಿರ್ದೇಶಕ ಸ್ವಾಮಿ ಅವರು ಮಣ್ಣುಪಾಲು ಮಾಡುತ್ತಿದ್ದಾರೆ.

ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಸಮೀಪವಿರುವ ಕೆಎಸ್‌ಓಯು ಪ್ರಾದೇಶಿಕ ಕಚೇರಿಯೇ ಈ ಪರೀಕ್ಷಾ ಕೇಂದ್ರವಾಗಿದೆ. ಕಳೆದ ಕೆಲವು ದಿನಗಳಿಂದ ಕರ್ನಾಟಕ ರಾಜ್ಯ ಮುಕ್ತ ವಿವಿಯ ಪರೀಕ್ಷೆಗಳು ನಡೆಯುತ್ತಿದ್ದು, ಅಕ್ಟೋಬರ್ 7ರಿಂದ ಆರಂಭಗೊಂಡು ಮುಕ್ತ ವಿವಿಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ನವೆಂಬರ್ 20ರವರೆಗೆ ನಡೆಯಲಿವೆ.


Spread the love

About Laxminews 24x7

Check Also

ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ

Spread the loveಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ  ಕೂಡ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ