Breaking News

ಬೆಳಗಾವಿ; ತವರಿಗೆ ಹೋದ ಪತ್ನಿ; ಇಬ್ಬರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

Spread the love

ಬೆಳಗಾವಿ, : ಪತ್ನಿ ತಮ್ಮನ್ನು ಬಿಟ್ಟು ತವರಿಗೆ ಹೋಗಿದ್ದರಿಂದ ಮನನೊಂದು ಇಬ್ಬರು ಮಕ್ಕಳ ಜೊತೆಗೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮ್ಮಣ್ಣ ಗಿಡ್ಡಾಳೆ (35) ಎಂಬುವರು ತಮ್ಮ ಮಕ್ಕಳಾದ ಚಿನ್ನು (2), ನಿರಂಜನ್ (10) ಅವರಿಗೆ ವಿಷ ಉಣಿಸಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಧಾರವಾಡ; ಉದ್ಯೋಗ ನಷ್ಟ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಹೆಂಡತಿ ಜೊತೆ ಜಗಳ ನಡೆದಿದ್ದು, ಪತ್ನಿ ತವರು ಮನೆಗೆ ಹೋಗಿದ್ದರು.

ಪತ್ನಿಯನ್ನು ಕರೆದುಕೊಂಡು ಬರಲು ತಮ್ಮಣ್ಣ ನಿನ್ನೆ ಹೆಂಡತಿಯ ತವರು ಮನೆ ಹುಕ್ಕೇರಿ ತಾಲೂಕಿನ ಕೇಸ್ತಿ ಗ್ರಾಮಕ್ಕೆ ಹೋಗಿದ್ದರು. ಆದರೆ ಪತ್ನಿಯ ಮನೆಯವರು ತಮ್ಮಣ್ಣನನ್ನು ಅವಮಾನಿಸಿ ವಾಪಸ್ ಕಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾತ್ರಿ ತಾನೂ ವಿಷ ಕುಡಿದು ಮಕ್ಕಳಿಗೂ ಉಣಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಹುಕ್ಕೇರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ

Spread the loveಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ