Breaking News

ಸೌದಿಯಲ್ಲಿ ಸಿಲುಕಿದ ಸಾವಿರಾರು ಕನ್ನಡಿಗರು – ರಕ್ಷಣೆಗಾಗಿ ಚಿಕ್ಕಮಗಳೂರು ಮೂಲದ ವ್ಯಕ್ತಿಯಿಂದ ಸರ್ಕಾರಕ್ಕೆ ಮನವಿ

Spread the love

ಚಿಕ್ಕಮಗಳೂರು: ಸೌದಿ ಅರೇಬಿಯಾದ  ರಿಯಾದ್ ಏರ್‌ಪೋರ್ಟ್‌ ಮೇಲೆ ಹೌತಿಗಳು ದಾಳಿ ನಡೆಸಿದ ಬಳಿಕ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಸುಮಾರು 4,000 ಕನ್ನಡಿಗರು ಸೌದಿ ಅರೇಬಿಯಾದ ಮೆಕ್ಕಾದಲ್ಲಿ  ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಶೇಷ ವಿಮಾನದ ವ್ಯವಸ್ಥೆ ಮಾಡಬೇಕು ಎಂದು ಚಿಕ್ಕಮಗಳೂರು  ಮೂಲದ ಅಪ್ಸರ್ ಹಿಂದೂಸ್ಥಾನಿ ಮನವಿ ಮಾಡಿದ್ದಾರೆ. ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಮಧ್ಯಮ ವರ್ಗ ಹಾಗೂ ಕೆಳ ವರ್ಗದ ಜನರಿಗೆ ಸರ್ಕಾರ ಸ್ಪಂದಿಸಬೇಕು. ಕನ್ನಡಿಗರನ್ನ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ವಿದೇಶಾಂಗ ಸಚಿವಾಲಯ ಕೂಡಲೇ ಕ್ರಮ ಕೈಗೊಳ್ಳಬೇಕು. ಸಿಎಂ ಡಿ.ಕೆ. ಶಿವಕುಮಾರ್ ತಕ್ಷಣ ಮಧ್ಯ ಪ್ರವೇಶಿಸಬೇಕು. ವಿಶೇಷ ವಿಮಾನದ ಮೂಲಕ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಬೇಕು ಎಂದು ಅಪ್ಸರ್‌ ಮನವಿ ಮಾಡಿದ್ದಾರೆ.

ಅ.8 ರಂದು ರಿಯಾದ್ ಏರ್‌ಪೋರ್ಟ್‌ ಮೇಲೆ ಇರಾನ್ ಬೆಂಬಲಿತ ಯೆಮೆನ್‌ನ ಹೌತಿ ಬಂಡುಕೋರರ ಗುಂಪು ಕ್ಷಿಪಣಿ ದಾಳಿ ನಡೆಸಿದ್ದಾಗಿ ಹೇಳಿಕೊಂಡಿತ್ತು. ಈ ಬೆಳವಣಿಗೆಯಿಂದ ಪ್ರದೇಶದಲ್ಲಿ ಈಗಾಗಲೇ ಇರುವ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿತ್ತು. ಇದಾದ ಬಳಿಕ ವಿಮಾನ ನಿಲ್ದಾಣವನ್ನು ಬಂದ್‌ ಮಾಡಲಾಗಿತ್ತು. ನವೆಂಬರ್ 4ರವರೆಗೆ ಸೌದಿ ಏರ್‌ಲೈನ್ಸ್, ಇಂಡಿಗೋ ವಿಮಾನಗಳ ಹಾರಾಟ ಮುಂದೂಡಿಕೆ ಮಾಡಲಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ದೆಹಲಿ ಹೈಕೋರ್ಟ್‌ನಲ್ಲಿ ನೆಹಾ ಬೋರಾಗೆ ಹಿನ್ನಡೆ – 10,000 ರೂ. ಬಾಂಡ್‌ಗೆ ಸಹಿ ಹಾಕಿ ಶಾಂತಿ ಕಾಪಾಡುವಂತೆ ಸೂಚನೆ

Spread the loveನವದೆಹಲಿ: ಅಖಿಲ ಭಾರತ ವಿದ್ಯಾರ್ಥಿ ಸಂಘದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಹೋರಾಟಗಾರ್ತಿ ನೆಹಾ ಬೋರಾ ಅವರಿಗೆ ದೆಹಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ