Breaking News

ಸ್ನಾನ ಮಾಡುವಾಗಲೇ ಜಾರಿ ಬಿದ್ದು ಮೃತಪಟ್ಟ ಯುವತಿ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ

Spread the love

ಚೆನ್ನೈ: ಪ್ರಿಯಕರನೊಂದಿಗೆ ಪುತ್ರಿ ಪರಾರಿಯಾಗುತ್ತಾಳೆ ಎಂದು ಭಾವಿಸಿದ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ.

ಬಾಲಾಜಿ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ. ಈತನ ಪುತ್ರಿ ಮೂರು ದಿನಗಳ ಹಿಂದೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು. ಗ್ರಾಮಸ್ಥರು ಅದನ್ನೇ ನಂಬಿದ್ದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ನೀಡಿದ್ದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಗೊತ್ತಾಗಿದೆ. ಕುಟುಂಬದವರು ಕೃತ್ಯದಲ್ಲಿ ಭಾಗಿಯಾಗಿರುವ ಅನುಮಾನದ ಮೇಲೆ ಪೊಲೀಸರು ಬಾಲಾಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಯುವಕನೊಬ್ಬನನ್ನು ಪ್ರೀತಿಸಿದ್ದ ಬಾಲಾಜಿಯ ಪುತ್ರಿ ಆತನನ್ನು ಮದುವೆಯಾಗುವುದಾಗಿ ಹೇಳಿದ್ದಳು. ಆದರೆ ಮನೆಯವರಿಗೆ ಇಷ್ಟವಿಲ್ಲದೆ ಬೇರೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದರು. ಇದಕ್ಕೆ ನಿರಾಕರಿಸಿದ ಯುವತಿ ಪ್ರಿಯಕರನೊಂದಿಗೆ ಓಡಿ ಹೋಗಲು ಯತ್ನಿಸಿದ್ದು, ಇದನ್ನು ಸಹಿಸದ ತಂದೆಯೇ ಮರ್ಯಾದೆ ಹೋಗುತ್ತದೆ ಎಂದು ಕೊಲೆ ಮಾಡಿದ್ದಾನೆ. ಬಳಿಕ ಜಾರಿ ಬಿದ್ದು ಮೃತಪಟ್ಟಿರುವುದಾಗಿ ಸುಳ್ಳು ಹೇಳಿದ್ದಾನೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ.


Spread the love

About Laxminews 24x7

Check Also

ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ

Spread the loveಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ