Breaking News

ಮಾತೃಭಾಷೆ ಕನ್ನಡ ಎಂದು ಉಲ್ಲೇಖಿಸಿದರೆ ಕನ್ನಡಿಗರಿಗೆ ಐಟಿ ಕಂಪನಿಗಳಲ್ಲಿ ಉದ್ಯೋಗ ಸಿಗಲ್ಲ: ವಿಡಿಯೋ ಹಂಚಿಕೊಂಡು ಕಣ್ಣೀರಿಟ್ಟ ಯುವತಿ

Spread the love

ಮಾತೃಭಾಷೆ ಕನ್ನಡ ಎಂದು ಉಲ್ಲೇಖಿಸಿದರೆ ಐಟಿ ಕಂಪನಿಗಳಲ್ಲಿ ಕೆಲಸ ಸಿಗುವುದಿಲ್ಲ ಎಂದು ಕನ್ನಡದ ಯುವತಿಯೊಬ್ಬಳು ಸಾಮಾಜಿಕ ಜಾಲ ತಾಣಗಳಲ್ಲಿ ವಿಡಿಯೋ ಹಂಚಿಕೊಂಡು ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಐಟಿ ಕಂಪನಿಗಳು ಉದ್ಯೋಗನೀಡುವ ಸಂದರ್ಭದಲ್ಲಿ ತೆಲುಗು ಮತ್ತು ತಮಿಳಿಗರಿಗೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ರೆಸ್ಯೂಮ್​ ನಲ್ಲಿ ಕನ್ನಡ ಮಾತೃಭಾಷೆ ಎಂದು ಉಲ್ಲೇಖಿಸಿದರೆ ಉದ್ಯೋಗ ಸಿಗುತ್ತಿಲ್ಲ ಎಂದು ಯುವತಿ ವಿಡಿಯೋ ಮೂಲಕ ಕಣ್ಣೀರಿಟ್ಟಿದ್ದಾರೆ.

ಬೆಂಗಳೂರಿನ ಕಾಲೇಜುಗಳಲ್ಲಿ ಕ್ಯಾಂಪಸ್​​ ಇಂಟರ್​ವ್ಯೂವ್​​ ಗಳನ್ನು​ ಮಾಡುತ್ತಿಲ್ಲ. ಬದಲಾಗಿ, ಕಡಿಮೆ ಸಂಬಳಕ್ಕೆ ಬೇರೆ ಕಡೆಯಿಂದ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿದ್ದಾರೆ. ಇದರಿಂದ ಕನ್ನಡಿಗರಿಗೆ ಅವಕಾಶಗಳು ಸಿಗುತ್ತಿಲ್ಲ. ಈ ಸಮಸ್ಯೆಗೆ ಪರಿಹಾರಕೊಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಐಟಿ ಕಂಪನಿಗಳಿಗೆ ಕಡಿಮೆ ವೇತನಕ್ಕೆ ಉದ್ಯೋಗಿಗಳು ಬರುತ್ತಾರೆ. ಬೇರೆ ಭಾಷಿಗರನ್ನು ಬೇರೆ ಕಡೆಯಿಂದ ಇಲ್ಲಿಗೆ ಕರೆದುಕೊಂಡು ಬರಲಾಗುತ್ತಿದೆ. ಹೀಗಾಗಿ ನಮ್ಮ ರಾಜ್ಯದಲ್ಲೇ ನಮಗೆ ಅವಕಾಶ ಸಿಗ್ತಿಲ್ಲ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದಕ್ಕೆ ಪರಿಹಾರ ಕೊಡಬೇಕು ಎಂದು ಯುವತಿ ಮನವಿ ಮಾಡಿದ್ದಾರೆ.

ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾಅರಣವಾಗಿದೆ. ಕನ್ನಡ ನೆಲದಲ್ಲಿ ಕನ್ನಡಿಗರೇ ಉದ್ಯೋಗ ಇಲ್ಲ ಎನ್ನುವಂತಾಗಿದೆ. ಕನ್ನಡ ಪರ ಹೋರಾಟಗಾರರು ಈ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ

Spread the loveಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ ಅವರಿಂದು (ಅ.24) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ