Breaking News

ಮೌಢ್ಯ ಬದಿಗೊತ್ತಿ ಚಾಮರಾಜನಗರಕ್ಕೆ ಭೇಟಿ ಕೊಟ್ಟ ಡಿಕೆಶಿ

Spread the love

ಚಾಮರಾಜನಗರ: ಈ ಕ್ಷೇತ್ರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯವನ್ನು ಬದಿಗೊತ್ತಿ ಸಿಎಂ ಡಿ.ಕೆ ಶಿವಕುಮಾರ್‌  ಅವರು ಚಾಮರಾಜನಗರಕ್ಕೆ  ಭೇಟಿ ನೀಡಿದ್ದಾರೆ.

ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನದಲ್ಲಿ ಅವರು ಭಾಗಿಯಾದರು. ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮವನ್ನು ಬುದ್ದನ ಪ್ರತಿಮೆ, ಬೋಧಿ ವೃಕ್ಷ ಹಾಗೂ ಪುಸ್ತಕಗಳಿಗೆ ಪುಷ್ಪಾರ್ಚನೆ ನೇರವೇರಿಸಿ ಧಮ್ಮ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಸಿಎಂಗೆ ಸಚಿವರಾದ ಮುನಿಯಪ್ಪ, ನರೇಂದ್ರಸ್ವಾಮಿಯವರು ಸಾಥ್‌ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಜ್ಞಾನ ಪ್ರಕಾಶ್ ಸ್ವಾಮೀಜಿ, ಮೂರನೇ ಅಂತರಾಷ್ಟ್ರೀಯ ಬೌದ್ಧ ಸಮ್ಮೇಳನ ಸಿಎಂ ತವರು ಜಿಲ್ಲೆಯಲ್ಲಿ ನಡೆಸಲು ನಿರ್ಧಾರಿಸಲಾಗಿದೆ. ಸಿಎಂ ಮನವಿ ಹಿನ್ನಲೆ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಚಾಮರಾಜನಗರದಿಂದ ಸಿಎಂ ಡಿಕೆಶಿಯವರು ರಸ್ತೆ ಮಾರ್ಗದಲ್ಲಿ ಮೈಸೂರಿಗೆ ತೆರಳಲಿದ್ದು, ಅಲ್ಲಿಂದ ಬೆಳಗಾವಿಗೆ ವಿಶೇಷ ವಿಮಾನದಲ್ಲಿ ಸಂಜೆ 5 ಗಂಟೆಗೆ ತೆರಳಲಿದ್ದಾರೆ.


Spread the love

About Laxminews 24x7

Check Also

ಮೌಢ್ಯ ಬದಿಗೊತ್ತಿ ಚಾಮರಾಜನಗರಕ್ಕೆ ಭೇಟಿ ಕೊಟ್ಟ ಡಿಕೆಶಿ

Spread the loveಚಾಮರಾಜನಗರ: ಈ ಕ್ಷೇತ್ರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯವನ್ನು ಬದಿಗೊತ್ತಿ ಸಿಎಂ ಡಿ.ಕೆ ಶಿವಕುಮಾರ್‌  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ