ಬೆಂಗಳೂರು:ಅಕ್ಟೋಬರ್ 11ರಂದು ಒಟ್ಟು 37 ವಿಷಯಗಳಿಗೆ ನಡೆದ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ಪರಿಗಣಿಸಿ ಈ ಫಲಿತಾಂಶ ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅ.26ರ ಬೆಳಿಗ್ಗೆ 10:30ರೊಳಗೆ ಇ-ಮೇಲ್ (cetonline.Karnataka.gov.in/kea/) ಮೂಲಕ ತಿಳಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ತಾತ್ಕಾಲಿಕ ಫಲಿತಾಂಶದ ಜೊತೆಗೆ ಅಂತಿಮ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
Laxmi News 24×7