Breaking News

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

Spread the love

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ  ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ ಸಿಕ್ಕಿದೆ.

ಘಟನೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿಲ್ಲ ಎಂದು ಸಿಸಿಎಫ್ ಹನುಮಂತಪ್ಪ ಅವರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆಂತರಿಕ ತನಿಖೆಯಲ್ಲಿ ಸೋಮಣ್ಣ ಆನೆಯ ವರ್ತನೆಯೇ ಘಟನೆಗೆ ಕಾರಣ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಆನೆ ರಂಪಾಟ ನಡೆಸಿದ ಘಟನೆ ಬಗ್ಗೆ ಸಿಸಿಎಫ್ ಹನುಮಂತಪ್ಪ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಸಲಾಗಿದೆ. ತನಿಖೆಯ ಬಳಿಕ ಅಧಿಕಾರಿಗಳ ನಿರ್ಲಕ್ಷ್ಯವಿಲ್ಲ ಎಂದು ವರದಿ ಸಲ್ಲಿಸಲಾಗಿದೆ. ಅಂಬಾರಿ ಹೊರಲು ಸೋಮಣ್ಣ ಆನೆಯನ್ನು ಆಯ್ಕೆ ಮಾಡಿದ ಪ್ರಕ್ರಿಯೆಯ ಬಗ್ಗೆಯೂ ವರದಿಯಲ್ಲಿ ವಿವರಿಸಲಾಗಿದೆ.

ಸರ್ಕಾರದ ಅನುಮತಿ ದೊರೆತ ಮರುದಿನದಿಂದಲೇ ಆನೆಗಳಿಗೆ ತಾಲೀಮು ಆರಂಭಿಸಲಾಗಿತ್ತು. ಪ್ರತಿದಿನ ಸುಮಾರು ನಾಲ್ಕು ಕಿಲೋಮೀಟರ್ ದೂರ ನಡೆಸಿ ತರಬೇತಿ ನೀಡಲಾಗಿತ್ತು. ಜೊತೆಗೆ ಆನೆಗಳಿಗೆ ಪೌಷ್ಟಿಕ ಆಹಾರವನ್ನೂ ಒದಗಿಸಲಾಗಿತ್ತು.

ದಸರಾ ಮೆರವಣಿಗೆಯ ವೇಳೆ ಎದುರಾಗುವ ಪಟಾಕಿ ಸದ್ದು, ಜನಸಂದಣಿ ಮತ್ತು ವಾಹನಗಳ ಶಬ್ದಕ್ಕೆ ಹೊಂದಿಕೊಳ್ಳುವಂತೆ ಆನೆಗಳಿಗೆ ತರಬೇತಿ ನೀಡಲಾಗಿತ್ತು. ಮೆರವಣಿಗೆ ಸಾಗುವ ರಸ್ತೆಯಲ್ಲಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ತಾಲೀಮು ನಡೆಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೂರು ಆನೆಗಳಿಗೂ ಸಮಾನವಾಗಿ ತರಬೇತಿ ನೀಡಲಾಗಿತ್ತು. ಪಶುವೈದ್ಯರು, ಆನೆಗಳ ಮಾವುತರು ಹಾಗೂ ಅನುಭವ ಹೊಂದಿರುವ ನಿವೃತ್ತ ಜಮೇದಾರ್ ಸೇರಿದಂತೆ ಅಧಿಕಾರಿಗಳ ತಂಡವು ಚರ್ಚೆ ನಡೆಸಿ ಸೋಮಣ್ಣ ಆನೆಯನ್ನು ಅಂಬಾರಿ ಹೊರಲು ಆಯ್ಕೆ ಮಾಡಿತ್ತು.

ಪ್ರತಿ ವರ್ಷದಂತೆ ಅಂಬಾರಿ ಹೊತ್ತ ಆನೆ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿತ್ತು. ಆದರೆ, ಮೆರವಣಿಗೆಯ ವೇಳೆ ನಡೆದ ರಂಪಾಟದ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ನಿರ್ಲಕ್ಷ್ಯವಿಲ್ಲ ಎಂದು ತನಿಖಾ ವರದಿ ತಿಳಿಸಿದೆ.


Spread the love

About Laxminews 24x7

Check Also

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

Spread the loveಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ  ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ