Breaking News

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ. ಸಂಕನೂರಗೆ ಭರ್ಜರಿ ಗೆಲುವು; 3ನೇ ಬಾರಿಗೆ ಪ್ರವೇಶ

Spread the love

ಧಾರವಾಡ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ 9,323 ಮತಗಳ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನೊಂದಿಗೆ ಅವರು ಸತತ ಮೂರನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದಂತಾಗಿದೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ನಡೆದ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸಂಕನೂರ ಅವರು, ಅಂತಿಮ ಸುತ್ತಿನಲ್ಲೂ ತಮ್ಮ ಪ್ರಾಬಲ್ಯ ಮುಂದುವರಿಸಿ ಗೆಲುವಿನ ನಗೆ ಬೀರಿದರು.

ಕೊನೆಯ ಸುತ್ತಿನಲ್ಲಿ ಎಣಿಕೆಯಾದ ಒಟ್ಟು 3,690 ಮತಗಳ ಪೈಕಿ ಬಿಜೆಪಿಯ ಎಸ್.ವಿ. ಸಂಕನೂರ 1,791 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ 1,188 ಮತಗಳನ್ನು ಗಳಿಸಿದರು.

ಚುನಾವಣೆಯ ಸಂಪೂರ್ಣ ಎಣಿಕೆಯ ಬಳಿಕ ಎಸ್.ವಿ. ಸಂಕನೂರ ಒಟ್ಟು 33,711 ಮತಗಳನ್ನು ಗಳಿಸಿ ಜಯಶೀಲರಾಗಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮೋಹನ ಲಿಂಬಿಕಾಯಿ 24,388 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ.

ಮೂರನೇ ಬಾರಿಗೆ ಕ್ಷೇತ್ರದ ಮತದಾರರು ಎಸ್.ವಿ. ಸಂಕನೂರ ಅವರ ಕೈಹಿಡಿದಿದ್ದು, ಗೆಲುವಿನ ಅಧಿಕೃತ ಪ್ರಕಟಣೆ ಹೊರಬೀಳುತ್ತಿದ್ದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.


Spread the love

About Laxminews 24x7

Check Also

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

Spread the loveಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ