Breaking News

ಧರ್ಮಸ್ಥಳ ಸೌಜನ್ಯ ಕೇಸ್‌ – ಪೋಸ್ಟ್ ಮಾರ್ಟಂ ಮಾಡಿದ್ದ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್‌

Spread the love

ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ  ಮರು ತನಿಖೆಗೆ ಸಂಬಂಧಿಸಿದಂತೆ ಪೋಸ್ಟ್ ಮಾರ್ಟಂ ಮಾಡಿದ್ದ ಸಿಬ್ಬಂದಿಗೆ ಎಸ್‌ಐಟಿ  ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

ಅಲ್ಲದೇ ಆರಂಭದಿಂದ ಕೊನೆಯ ತನಿಖೆಯವರೆಗೂ ಇದ್ದ ಪೊಲೀಸ್ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಆರಂಭದಲ್ಲಿ ಸಾಕ್ಷಿ ನಾಶ ಮಾಡಿದ ಬಗ್ಗೆ ಇವರ ಮೇಲೆ ಆರೋಪ ಕೇಳಿಬಂದಿತ್ತು. ಆರೋಪಗಳ ಹಿನ್ನಲೆಯಲ್ಲಿ ಎಸ್‌ಐಟಿ ವಿಚಾರಣೆಗೆ ಮುಂದಾಗಿದೆ. ಶುಕ್ರವಾರ (ಅ.30) ವಿಚಾರಣೆಗೆ ಹಾಜರಾಗುವಂತೆ ನೊಟೀಸ್‌ನಲ್ಲಿ ಸೂಚಿಸಲಾಗಿದೆ.

2012ರಲ್ಲಿ ಪ್ರಕರಣದ ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿ ಯೋಗೇಶ್‌ ಗೌಡ ಅವರಿಗೂ ನೋಟಿಸ್‌ ನೀಡಲಾಗಿತ್ತು. ತನಿಖೆಯ ಪ್ರಾಥಮಿಕ ಹಂತದಲ್ಲಿ ಪೊಲೀಸ್ ಅಧಿಕಾರಿ ಯೋಗೇಶ್ ಸಾಕ್ಷ್ಯನಾಶ ಮಾಡಿದ್ದರು ಎಂದು ಆರೋಪಿಸಲಾಗಿತ್ತು.


Spread the love

About Laxminews 24x7

Check Also

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

Spread the loveಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ