Breaking News

ಸಿಎಂ, ಜಮೀರ್ ಅಹ್ಮದ್ ವಿರುದ್ಧ ಧನ್ವೀರ್‌ದ್ದು ಎನ್ನಲಾದ ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾನೂನು ಕ್ರಮಕ್ಕೆ ಕೀರ್ತನ್ ಗೌಡ ಆಗ್ರಹ

Spread the love

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಹಾಗೂ ಸಚಿವ ಜಮೀರ್ ಅಹಮದ್ ಖಾನ್  ಅವರ ವಿರುದ್ಧ ನಟ ಧನ್ವೀರ್ ಅವರು ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳ ಕುರಿತು ಸೂಕ್ತ ತನಿಖೆ ನಡೆಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಆಗ್ರಹಿಸಿದ್ದಾರೆ.

ಪ್ರತಿಕಾ ಹೇಳಿಕೆ ನೀಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕಿದೆ. ಆದರೆ, ಆ ಹಕ್ಕನ್ನು ಬಳಸುವಾಗ ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಸಂಯಮ, ಜವಾಬ್ದಾರಿ ಮತ್ತು ಪರಸ್ಪರ ಗೌರವವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು, ವಿಚಾರಧಾರೆಗಳು ಬೇರೆಬೇರೆಯಾಗಿರಬಹುದು. ಆದರೆ, ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವ ನೆಪದಲ್ಲಿ ವೈಯಕ್ತಿಕ ನಿಂದನೆ ಅಥವಾ ಆಕ್ಷೇಪಾರ್ಹ ಪದಪ್ರಯೋಗಗಳಿಗೆ ಅವಕಾಶ ನೀಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಪ್ರಮುಖ ಸಾಂವಿಧಾನಿಕ ಹುದ್ದೆಯಲ್ಲಿದ್ದು, ಸಚಿವ ಜಮೀರ್ ಅಹಮದ್ ಖಾನ್ ಅವರು ರಾಜ್ಯ ಸರ್ಕಾರದ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಸಾರ್ವಜನಿಕ ವ್ಯಕ್ತಿಗಳ ಕುರಿತು ಯಾವುದೇ ಟೀಕೆ ಮಾಡುವಾಗ ವಿಷಯಾಧಾರಿತವಾಗಿ ಮತ್ತು ಗೌರವಯುತವಾಗಿ ಮಾತನಾಡುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಾಗಿದೆ. ಟೀಕೆ ಮತ್ತು ವಿಮರ್ಶೆ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗಗಳಾಗಿದ್ದರೂ, ಅವು ಕಾನೂನಿನ ಮಿತಿಯೊಳಗೆ ಇರಬೇಕು ಎಂದಿದ್ದಾರೆ.

ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕಲಾವಿದರು ಹಾಗೂ ಸಾರ್ವಜನಿಕವಾಗಿ ಪ್ರಭಾವ ಹೊಂದಿರುವ ವ್ಯಕ್ತಿಗಳು ತಮ್ಮ ಮಾತುಗಳು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಅರಿತುಕೊಳ್ಳಬೇಕು. ಯುವಜನತೆ ಸೇರಿದಂತೆ ಸಾವಿರಾರು ಜನರು ಕಲಾವಿದರನ್ನು ಅನುಸರಿಸುತ್ತಾರೆ. ಹೀಗಾಗಿ, ಸಾರ್ವಜನಿಕ ವೇದಿಕೆಗಳಲ್ಲಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಮಾತನಾಡುವಾಗ ಜವಾಬ್ದಾರಿಯುತ ನಡವಳಿಕೆ ಅಗತ್ಯವಾಗಿದೆ. ಸಮಾಜದಲ್ಲಿ ಪರಸ್ಪರ ಗೌರವ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಬೆಳೆಸುವಂತಹ ಮಾತುಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆ ನಟ ಧನ್ವೀರ್ ಅವರ ಹೇಳಿಕೆಗಳ ನಿಖರತೆ ಮತ್ತು ಸಂದರ್ಭವನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು. ಹೇಳಿಕೆಗಳಲ್ಲಿ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಯಾವುದೇ ಒತ್ತಡ ಅಥವಾ ಪಕ್ಷಪಾತವಿಲ್ಲದೆ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಜೀವನದಲ್ಲಿ ಜವಾಬ್ದಾರಿಯುತ ನಡೆ ಮತ್ತು ಕಾನೂನಿನ ಗೌರವವನ್ನು ಪ್ರತಿಯೊಬ್ಬರೂ ಪಾಲಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

Spread the loveಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ