Breaking News

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

Spread the love

ಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. ಪ್ರಿಯತಮನಿಂದ ದೂರವಾಗಿದ್ದಕ್ಕೆ ರೊಚ್ಚಿಗೆದ್ದಿದ್ದ ಪಾಗಲ್ ಪ್ರೇಮಿ ಬೈಕ್‌ಗೆ ಬೆಂಕಿ ಹಚ್ಚಿದ್ದಾನೆ.

ನಂದನ್ ಎಂಬಾತ ಇನ್‌ಸ್ಟಾಗ್ರಾಂನಲ್ಲಿ ಸಂಧ್ಯಾ ಎಂಬ ಮಹಿಳೆಯನ್ನ ಪರಿಚಯ ಮಾಡಿಕೊಂಡಿದ್ದ. ನಂತರ ಅದು ಪ್ರೀತಿಗೆ ತಿರುಗಿತ್ತು. ಕಳೆದ 3-4 ತಿಂಗಳಿಂದ ಪ್ರೀತಿ ಪ್ರೇಮ ಅಂತಾ ನಂದನ್ – ಸಂಧ್ಯಾ ಸುತ್ತಾಡಿದ್ರು. ಆದರೆ ಕಾರಣಾಂತರಗಳಿಂದ ಇತ್ತೀಚೆಗೆ ಸಂಧ್ಯಾ, ನಂದನ್‌ನಿಂದ ದೂರವಾಗಿದ್ದಳು. ತಂಗಿಯ ಮನೆಯಲ್ಲಿ ಉಳಿದುಕೊಂಡು ಜೀವನ ಸಾಗಿಸುತ್ತಿದ್ದ ಸಂಧ್ಯಾಳನ್ನ ಮತ್ತೆ ಸಂಪರ್ಕಿಸಲು ನಂದನ್ ಪ್ರಯತ್ನಿಸಿದ್ದ.

ಇದೇ ತಿಂಗಳ 19 ರಂದು ರಾತ್ರಿ ಸಂಧ್ಯಾ ಉಳಿದುಕೊಂಡಿದ್ದ ಮನೆ ಬಳಿ ಬಂದಿದ್ದ ನಂದನ್, ಸಂಧ್ಯಾಳನ್ನ ಹೊರಗೆ ಕಳುಹಿಸುವಂತೆ ಮನೆಯ ಬಾಗಿಲು ತಟ್ಟಿದ್ದಾನೆ. ಆದರೆ ನಂದನ್‌ ವರ್ತನೆಯಿಂದ ಭಯಗೊಂಡಿದ್ದ ಮನೆಯವರು ಬಾಗಿಲು ತೆರೆಯಲು ನಿರಾಕರಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ನಂದನ್, ಮನೆ ಬಳಿ ನಿಲ್ಲಿಸಿದ್ದ ಸಂಧ್ಯಾಳ ಬಾವ ಸುನೀಲ್ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದಾನೆ .

ನಂದನ್ ಬೆಂಕಿ ಹಚ್ಚಿದ ಪರಿಣಾಮ ಸುನೀಲ್ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಷ್ಟೇ ಅಲ್ಲ, ಪಕ್ಕದಲ್ಲೇ ನಿಲ್ಲಿಸಿದ್ದ ಮತ್ತೊಂದು ವಾಹನಕ್ಕೂ ಹಾನಿಯಾಗಿದೆ. ಘಟನೆ ಸಂಬಂಧ ಸಂಧ್ಯಾಳ ಬಾವ ಸುನೀಲ್ ಕೋಣನಕುಂಟೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಎನ್‌ಸಿಆರ್ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ. ಮತ್ತೊಂದು ಕಡೆ ಜೀವನ ನಡೆಸಲು ಡೆಲಿವರಿ ಕೆಲಸ ಮಾಡಿಕೊಂಡಿದ್ದ ಸುನೀಲ್ ಕುಟುಂಬಸ್ಥರು, ಬೈಕ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.


Spread the love

About Laxminews 24x7

Check Also

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

Spread the loveಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ