ಬೆಳಗಾವಿ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದ್ದು, ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 31ರಂದು ಶನಿವಾರ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.
ಎಸ್ಎಸ್ಎಲ್ಸಿ, ಐಟಿಐ, ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಬೆಳಗಾವಿಯ ಸುವರ್ಣ ವಿಧಾನಸೌಧದ ತಳಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೊಠಡಿ ಸಂಖ್ಯೆ ಟಿಪಿ2 ಮತ್ತು ಟಿಪಿ3ರಲ್ಲಿ ಸಂದರ್ಶನ ನಡೆಯಲಿದೆ.
ಉದ್ಯೋಗಾವಕಾಶ ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ಇತರೆ ಯಾವುದೇ ಸೌಲಭ್ಯಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Laxmi News 24×7