Breaking News

ವಿಷಗಾಳಿ ಸೇವಿಸಿ ಮೂವರು ಮೀನುಗಾರರ ಸಾವು – ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

Spread the love

ಕಾರವಾರ: ಗೋಕರ್ಣ  ತದಡಿ ಮೀನುಗಾರಿಕಾ ಬಂದರಿನಲ್ಲಿ ಮೀನಿನ ತ್ಯಾಜ್ಯ ತೆರವುಗೊಳಿಸುವ ವೇಳೆ ವಿಷಗಾಳಿ ಸೇವಿಸಿ ಮೂವರು ಮೀನುಗಾರರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಿಲಾಗಿದೆ.

ಮೀನುಗಾರಿಕಾ ಸಚಿವ ಕೆ.ಎಸ್. ಬಸವಂತಪ್ಪ ಅವರು ಮೃತರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇದೇ ವೇಳೆ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ಮೃತರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದಾಗಿಯೂ ಭರವಸೆ ನೀಡಿದರು.

ತದಡಿ ಬಂದರಿನಲ್ಲಿ ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿತ್ತು. ‘ಕುಜೈಮಾ’ ಹೆಸರಿನ ಮೀನುಗಾರಿಕಾ ಬೋಟ್‌ನಲ್ಲಿ ಹಿಡಿದ ಮೀನುಗಳನ್ನು ಹೊರತೆಗೆದ ಬಳಿಕ, ಕೊಳೆತು ದುರ್ವಾಸನೆ ಬೀರುತ್ತಿದ್ದ ‘ಚಮನ್’ ಮೀನಿನ ತ್ಯಾಜ್ಯವನ್ನು ತೆರವುಗೊಳಿಸುವ ಸಂದರ್ಭದಲ್ಲಿ ಮೀನುಗಾರರು ವಿಷಕಾರಿ ಅನಿಲ ಗಾಳಿ ಸೇವಿಸಿ ಅಸ್ವಸ್ಥರಾಗಿದ್ದರು. ಈ ಪೈಕಿ ಮೂವರು ಮೃತಪಟ್ಟಿದ್ದರು.

ಈ ಘಟನೆಯಲ್ಲಿ ಹಿಣಿ ಕಾಗಾಲ್‌ನ ನೌಶಾದ್ (37), ಹುಬ್ಬಣಗಿರಿಯ ಅಮೀನ್ (39) ಹಾಗೂ ವನ್ನಳ್ಳಿಯ ಅಮನ್ ಲಂಗಡೋ (20) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕುಮಟಾ ತಾಲೂಕಿನ ಬೆಟಗುಳಿಯ ಯಾಕೂಬ್ (64) ಹಾಗೂ ಸಂತೆಗುಳಿಯ ಖಾದಿರ್ (35) ಅಸ್ವಸ್ಥರಾಗಿದ್ದಾರೆ. ಇವರಲ್ಲಿ ಯಾಕೂಬ್ ಅವರ ಸ್ಥಿತಿ ಗಂಭೀರವಾಗಿದ್ದು, ಖಾದಿರ್ ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆಗೆ ಕಾರಣವಾದ ಅಂಶಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಚಿವರು ಸೂಚಿಸಿದ್ದಾರೆ. ಬಂದರಿನಲ್ಲಿ ಮೀನುಗಾರಿಕಾ ತ್ಯಾಜ್ಯ ತೆರವುಗೊಳಿಸುವ ಸಂದರ್ಭದಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಗಮನಹರಿಸಲು ತಿಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ದೀಪನ್ ಎಂ ಎನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ ನಾಯ್ಕ ಸೇರಿದಂತೆ ಹಲವು ಮುಂಖಂಡರು ಹಾಗೂ ಮೀನುಗಾರರ ಮುಖಂಡರು ಉಪಸ್ತಿತರಿದ್ದರು. 


Spread the love

About Laxminews 24x7

Check Also

ವಿಷಗಾಳಿ ಸೇವಿಸಿ ಮೂವರು ಮೀನುಗಾರರ ಸಾವು – ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

Spread the loveಕಾರವಾರ: ಗೋಕರ್ಣ  ತದಡಿ ಮೀನುಗಾರಿಕಾ ಬಂದರಿನಲ್ಲಿ ಮೀನಿನ ತ್ಯಾಜ್ಯ ತೆರವುಗೊಳಿಸುವ ವೇಳೆ ವಿಷಗಾಳಿ ಸೇವಿಸಿ ಮೂವರು ಮೀನುಗಾರರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ