Breaking News

ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ: ಅಡಿವೇಶ ಇಟಗಿ

Spread the love

ಬೆಳಗಾವಿ: ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ಆಯೋಜಿಸುವುದರ ಜೊತೆಗೆ, ಸಮ್ಮೇಳನದಲ್ಲಿ ಭಾಗವಹಿಸುವ ಮಕ್ಕಳ ಸುರಕ್ಷತೆ, ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ವೀಡಿಯೊ ಸಂವಾದ ಸಭಾಂಗಣದಲ್ಲಿ ಗುರುವಾರ (ಅ.29) ನಡೆದ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ವ್ಯಸನವನ್ನು ಕಡಿಮೆ ಮಾಡುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ವತಿಯಿಂದ ₹50 ಲಕ್ಷ ಅನುದಾನ ಬಳಸಿಕೊಂಡು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಅಂದಾಜು ₹2 ಕೋಟಿ ವೆಚ್ಚದ ಯೋಜನೆ ರೂಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತೊಂದು ಸಭೆ ನಡೆಸಿ ಸಮ್ಮೇಳನದ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಅಡಿವೇಶ ಇಟಗಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕನಿಷ್ಠ ಮೂರು ದಿನಗಳ ಕಾಲ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಸಮ್ಮೇಳನದ ಯಶಸ್ವಿ ಆಯೋಜನೆಗಾಗಿ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಆಂತರಿಕ ಸಮಿತಿಗಳನ್ನು ರಚಿಸಬೇಕು. ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳ ಆದೇಶದಂತೆ ಮಕ್ಕಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಮಕ್ಕಳು ಹಾಗೂ ಸ್ಥಳೀಯ ಮಕ್ಕಳ ಸಂಖ್ಯೆಯನ್ನು ಆಧರಿಸಿ ವಸತಿ ಮತ್ತು ಊಟದ ವ್ಯವಸ್ಥೆಗೆ ಅಗತ್ಯ ಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದರು.

ಸಮ್ಮೇಳನಕ್ಕೆ ಆಗಮಿಸುವ ಮಕ್ಕಳಿಗೆ ಅಲ್ಪಾಹಾರ, ಊಟ ಹಾಗೂ ಸಾರಿಗೆ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸಬೇಕು. ವಿಶೇಷವಾಗಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ, ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಹುಲ್ ಶಿಂಧೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲೀಲಾವತಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಮೂರ್ತಿ, ಸುಮಿತ್ರಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ