Breaking News

MLC ಚುನಾವಣೆ ಸೋತಿದ್ದಕ್ಕೆ ಸಿಎಂ ಹಾಲಿನ ದರ ಏರಿಕೆ ನಿರ್ಧಾರ ಮಾಡಿದಂತೆ ಕಾಣಿಸ್ತಿದೆ – ವಿಜಯೇಂದ್ರ

Spread the love

ಹಾಸನ: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಕಾಂಗ್ರೆಸ್‌ಗೆ ಮರ್ಮಾಘಾತವಾಗಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಸೋತಿರುವ ಪರಿಣಾಮವಾಗಿ ರಾಜ್ಯದ ಮುಖ್ಯಮಂತ್ರಿಗಳು ಹಾಲಿನ ದರ ಎಂಟು ರೂ. ಏರಿಕೆ ನಿರ್ಧಾರ ಮಾಡಿದಂತೆ ಕಾಣುತ್ತಿದೆ ಎಂದು ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಹೇಳಿದ್ದಾರೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ದಿಂಡಿಘಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಕಾಂಗ್ರೆಸ್‌ಗೆ ಮರ್ಮಾಘಾತವಾಗಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಸೋತಿರುವ ಪರಿಣಾಮವಾಗಿ ರಾಜ್ಯದ ಮುಖ್ಯಮಂತ್ರಿಗಳು ಹಾಲಿನ ದರ ಎಂಟು ರೂ. ಏರಿಕೆ ನಿರ್ಧಾರ ಮಾಡಿದಂತೆ ಕಾಣುತ್ತಿದೆ. ಈ ಮಧ್ಯೆ ರೈತರಿಗೆ ಏಳು ರೂ. ಜಾಸ್ತಿ ಕೊಡ್ತರೆ ಎಂದರೆ ಸಂತೋಷ ಎಂದು ತಿಳಿಸಿದ್ದಾರೆ.

ಒಂದು ಕಡೆ ಭೀಕರ ಬರಗಾಲವಿದೆ. ರೈತರಿಗೆ ಹೆಕ್ಟೇರ್‌ಗೆ 50 ಸಾವಿರ ರೂ. ಪರಿಹಾರ ಕೊಡಬೇಕೆಂದು ಬಿಜೆಪಿ ಒತ್ತಾಯ ಮಾಡಿತ್ತು. ಬರಗಾಲದ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಹೈನುಗಾರಿಕೆಗೆ ಪ್ರೋತ್ಸಾಹ ಕೊಡಲು ನಾಲ್ಕು ರೂ.ಗೆ ಏರಿಸಿದ್ರು, ಅದರದ್ದೇ 800-900 ಕೋಟಿ ರೂ.ಯನ್ನು ಈ ಬರಗಾಲದ ಸಂದರ್ಭದಲ್ಲಿ ಬಾಕಿ ಉಳಿಸಿಕೊಂಡಿದ್ದಾರೆ. ಇದರ ಮಧ್ಯೆ ರೈತರಿಗೆ ಏಳು ರೂ ಜಾಸ್ತಿ ಕೊಡ್ತರೆ ಎಂದರೆ ಸಂತೋಷ. ಆದರೆ ಗ್ರಾಹಕರ ಮೇಲೆ ಏಕೆ ಬರೆ ಹಾಕ್ತೀರಿ. ರಾಜ್ಯ ಸರ್ಕಾರ ಹಣ ತುಂಬಲಿ, ಜವಾಬ್ದಾರಿ ತೆಗೆದುಕೊಳ್ಳಲಿ ಎಂದಿದ್ದಾರೆ.

ಸರ್ಕಾರ ಖಂಡಿತ ಜನ ವಿರೋಧಿ ನೀತಿಯನ್ನು ಮಾಡುತ್ತಿದೆ. ಇವರ ಯೋಗ್ಯತೆಗೆ ಅಭಿವೃದ್ಧಿಗೆ ಹಣ ಕೊಡಲು ಆಗುತ್ತಿಲ್ಲ. ಶಾಸಕರಿಗೆ ಕ್ಷೇತ್ರಗಳಿಗೆ ಹೋಗಲು ಆಗುತ್ತಿಲ್ಲ. ಮತ್ತೊಂದೆಡೆ ಭ್ರಷ್ಟಾಚಾರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬರೆ ಎಳೆಯುವ ಕೆಲಸ ಮಾಡಿದ್ದಾರೆ ಖಂಡಿತಾ ಇದು ಸರಿಯಲ್ಲ. ಎಲ್ಲರೂ ಕೂಡ ವಿರೋಧವನ್ನು ಮಾಡ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ