Breaking News

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ, ಇತರ ರಾಜ್ಯಗಳಲ್ಲಿಯೂ ಇದೇ ರೀತಿಯಲ್ಲಿ ಆಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ  ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ. ಆದರೆ ನಮ್ಮ ಆಕ್ಷೇಪ ಇರೋದು ಬೇರೆ ರಾಜ್ಯಗಳ ಬಗ್ಗೆ. ಇತರ ರಾಜ್ಯಗಳಲ್ಲಿಯೂ ಇದೇ ರೀತಿಯಲ್ಲಿ ಪ್ರಕ್ರಿಯೆ ನಡೆಯಬೇಕು ಎಂಬುದು ನಮ್ಮ ಆಶಯ ಎಂದಿದ್ದಾರೆ.

ಶಿಫ್ಟ್ ಆಗಿದ್ದವರು ಇದ್ದಾರೆ, ಸತ್ತವರು ಇದ್ದಾರೆ. ಎರಡು ಹೆಸರು ಇದ್ದವರು ಇದ್ದಾರೆ. ದೊಡ್ಡ ಪ್ರಮಾಣದಲ್ಲಿ ಹೆಸರು ತೆಗೆದು ಹಾಕಿರುವುದು ಸಮರ್ಥನೀಯ. ಕರ್ನಾಟಕದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯನ್ನು ನಾವು ವಿರೋಧಿಸಿಲ್ಲ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಬಿಹಾರದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಗೆ ಆಕ್ಷೇಪವಿದೆ. ನಾವು ನಡೆಸಿದ ಪ್ರತಿಭಟನೆಗಳು, ನೀಡಿದ ತರಬೇತಿ ಪರಿಣಾಮವಾಗಿ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಸಮರ್ಪಕವಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ