Breaking News

5,431 FDA-SDA ಹುದ್ದೆಗಳಿಗೆ ಅರ್ಜಿ ಆಹ್ವಾನ – ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

Spread the love

ಬೆಂಗಳೂರು: ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವೀತಿಯ ದರ್ಜೆ ಸಹಾಯಕರ  ಹುದ್ದೆಗಳ ನೇಮಕಾತಿಗೆ ಕೆಇಎ ಇಂದು ಅಧಿಸೂಚನೆ ಹೊರಡಿಸಿದೆ.

ನಾಳೆಯಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.26 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.

ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 FDC ಹಾಗೂ 2,070 SDC ಹಾಗೂ‌ ಕಲ್ಯಾಣ ಕರ್ನಾಟಕ ವೃಂದದ 563 FDC ಹಾಗೂ 635 FDC ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗಳನ್ನ 2027ರ ಜನವರಿ 8, 9 , 10, 16 ಮತ್ತು 17ರಂದು ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ KEA ವೆಬ್ ಸೈಟ್‌ನಲ್ಲಿ ಪರಿಶೀಲಿಸಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌. ಪ್ರಸನ್ನ ತಿಳಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ