Breaking News

ಬೆಳಗಾವಿ ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ದರ್ಶನ ಎಚ್.ವಿ.

Spread the love

ಬೆಳಗಾವಿ:  ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ದರ್ಶನ ಎಚ್.ವಿ. ಅವರನ್ನು ನೇಮಕಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ದರ್ಶನ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯಿತಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಬೆಳಗಾವಿ ಜಿಪಂ ಸಿಇಒ ಆಗಿದ್ದ ಡಾ. ಕೆ.ವಿ ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಡಾ. ಕೆ.ವಿ ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಸಿ ಸರ್ಕಾರ ಆದೇಶ ಹೊರಡಿಸಿದೆ.

 

ಡಾ. ರಾಜೇಂದ್ರ ಕೆ.ವಿ ಅವರು 2013 ಕರ್ನಾಟಕ ಕೆಡೆರ್ ನ ಐಎಸ್ ಅಧಿಕಾರಿಯಾಗಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ಮೂಲದವರಾಗಿರುವ ಇವರು ವೈದ್ಯರಾಗಿದ್ದರು. ನಂತರ ನಾಗರಿಕ ಸೇವೆ ಆಸಕ್ತಿಯಿಂದ ಐಎಎಸ್ ಪರೀಕ್ಷೆ ಬರೆದ ಇವರು ದೇಶದಲ್ಲಿ 32 ನೇ ರ್ಯಾಂಕ್ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದರು.

ರಾಜೇಂದ್ರ ಅವರು ಕಳೆದ ಒಂದು ವರೆ ವರ್ಷಗಳ ಅವಧಿಗೂ ಮೇಲೂ ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ

 


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ