Breaking News

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆಗೆ ನಿರ್ಬಂಧ; ಡಿಸಿ ಆದೇಶ

Spread the love

ಬೆಳಗಾವಿ: ಜಿಲ್ಲೆಯ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ಸೇರಿದಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆ ಹಾಗೂ ರಸ್ತೆ ತಡೆ ನಡೆಸುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಗುಂಪು ಪ್ರತಿಭಟನೆ, ಧರಣಿ, ಮೆರವಣಿಗೆ ಸೇರಿದಂತೆ ಯಾವುದೇ ಉದ್ದೇಶಕ್ಕಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ ನಡೆಸುವಂತಿಲ್ಲ. ಅಲ್ಲದೆ, ವಾಹನ ಸಂಚಾರವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಸ್ಥಗಿತಗೊಳಿಸುವುದು ಹಾಗೂ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸುವುದನ್ನೂ ನಿಷೇಧಿಸಲಾಗಿದೆ.

ಅಕ್ಟೋಬರ್ 30, 2026ರಂದು ಈ ಸಂಬಂಧ ಆದೇಶ ಹೊರಡಿಸಲಾಗಿದ್ದು, ಮುಂದಿನ ಆದೇಶದವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆ ಕಾಪಾಡುವುದು, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವುದು, ತುರ್ತು ಸೇವೆಗಳ ನಿರಂತರ ಕಾರ್ಯನಿರ್ವಹಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ ನಡೆಸುವ ಪ್ರತಿಭಟನೆಗಳಿಗೆ ಈ ಆದೇಶದಿಂದ ಬ್ರೇಕ್ ಬಿದ್ದಂತಾಗಿದೆ.


Spread the love

About Laxminews 24x7

Check Also

ನ.13 ರಂದೇ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ – ತೇಜಸ್ವಿ ಸೂರ್ಯ

Spread the loveಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟನೆ ಕುರಿತು ಹೊಸ ಅಪ್ಡೇಟ್‌ ಬಂದಿದೆ. ಬೆಂಗಳೂರು ದಕ್ಷಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ