Breaking News

ಕೆಪಿಎಸ್ ಸಿ ಹಗರಣ: ಮಹತ್ವದ ಆದೇಶ ನೀಡಿದ ಹೈಕೋರ್ಟ್

Spread the love

ಕರ್ನಾಟಕ ಲೋಕಸೇವಾ ಆಯೋಗದ  ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿರುವ ನ್ಯಾಯಾಲಯ, ತಂಡದ ನೇತೃತ್ವಕ್ಕೆ ಇಬ್ಬರು ದಕ್ಷ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಈ ಹಿಂದೆ ನಡೆದ ತನಿಖಾಧಿಕಾರಿಗಳ ಕುರಿತು ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ ಆಕ್ಷೇಪಣೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠವು ಈ ಪ್ರಮುಖ ಆದೇಶವನ್ನು ಪ್ರಕಟಿಸಿದೆ.

ಹಗರಣದ ಸಮಗ್ರ ತನಿಖೆಗಾಗಿ ಹಿರಿಯ ಐಪಿಎಸ್ ಅಧಿಕಾರಿಗಳಾದ ಆರ್. ಹಿತೇಂದ್ರ ಹಾಗೂ ಸೌಮೇಂದು ಮುಖರ್ಜಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ ಹೈಕೋರ್ಟ್ ಆದೇಶಿಸಿದೆ. ಈ ಹಿಂದೆ ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಐಡಿ ಅಧಿಕಾರಿಗಳನ್ನು ಎಸ್‌ಐಟಿಯಲ್ಲಿ ಮುಂದುವರಿಸಬಾರದು ಎಂದು ಪೀಠ ಸ್ಪಷ್ಟಪಡಿಸಿದೆ.

ಮುಲಾಜಿಗೂ ಒಳಗಾಗದೆ ಸಂಪೂರ್ಣ ಸ್ವತಂತ್ರ ಹಾಗೂ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ರೀತಿಯಲ್ಲಿ ತನಿಖೆ ನಡೆಸುವಂತೆ ಎಸ್‌ಐಟಿಗೆ ಕೋರ್ಟ್ ನಿರ್ದೇಶಿಸಿದೆ. ಎಸ್‌ಐಟಿ ಅಧಿಕಾರಿಗಳು ತನಿಖೆಗೆ ಅಗತ್ಯವೆಂದು ಸೂಚಿಸುವ ಸಿಬ್ಬಂದಿಗಳನ್ನು ಸರ್ಕಾರ ತಕ್ಷಣವೇ ನೇಮಿಸಬೇಕು. ಜೊತೆಗೆ ಎಸ್‌ಐಟಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ರಾಜ್ಯ ಸರ್ಕಾರವೇ ಒದಗಿಸಬೇಕು. ಪ್ರಕರಣದ ಅಕ್ರಮ ಹಣ ವರ್ಗಾವಣೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಹಾಗೂ ನೂತನ ಎಸ್‌ಐಟಿ ಪರಸ್ಪರ ಪೂರಕವಾಗಿ ಮತ್ತು ಸಮನ್ವಯದಿಂದ ಕೆಲಸ ಮಾಡುವಂತೆ ಹೈಕೋರ್ಟ್ ಸೂಚಿಸಿದೆ.


Spread the love

About Laxminews 24x7

Check Also

ನ.13 ರಂದೇ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ – ತೇಜಸ್ವಿ ಸೂರ್ಯ

Spread the loveಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟನೆ ಕುರಿತು ಹೊಸ ಅಪ್ಡೇಟ್‌ ಬಂದಿದೆ. ಬೆಂಗಳೂರು ದಕ್ಷಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ