Breaking News

38 ಸಾವಿರ ಕೋಟಿ ರೂ. ಬಾಕಿ ಬಿಡುಗಡೆಗೆ ಗಡುವು – ಸಿಎಂ ಜೊತೆ ಗುತ್ತಿಗೆದಾರರ ನಿಯೋಗ ಚರ್ಚೆ

Spread the love

ಬೆಂಗಳೂರು: 38 ಸಾವಿರ ಕೋಟಿ ರೂ. ಬಾಕಿ ಬಿಡುಗಡೆಗೆ ಗಡುವು ನೀಡಿದ ಬೆನ್ನಲ್ಲೇ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹಾಗೂ ಪದಾಧಿಕಾರಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಬಾಕಿ ಹಣ ಬಿಡುಗಡೆಗೆ ಗುತ್ತಿಗೆದಾರರ ಪಟ್ಟು ಹಿಡಿದಿದ್ದು, ಈಗಾಗಲೇ ಡಿಸೆಂಬರ್‌ವರೆಗೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ. ಗಡುವು ನೀಡಿದ ಬೆನ್ನಲ್ಲೇ ಸಿಎಂ ಜೊತೆ ಗುತ್ತಿಗೆದಾರರು ಸಭೆ ನಡೆಸಿದ್ದಾರೆ. ಇತ್ತೀಚೆಗೆ ಗುತ್ತಿಗೆದಾರರು ಶಾಸಕರ ವಿರುದ್ಧ 70% ಕಮಿಷನ್ ಆರೋಪ ಸಹ ಮಾಡಿದ್ದರು.

ಒಂದೊಂದು ಬಾಟಲ್‌ ವಿಷ ಕೊಟ್ಬಿಡಿ ಎಂದಿದ್ದ ಗುತ್ತಿಗೆದಾರರು
ಇತ್ತೀಚೆಗೆ ಬಾಕಿ ಹಣ ಬಿಡುಗಡೆ ಬಗ್ಗೆ ಮಾತನಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ 1.5 ಲಕ್ಷ ಗುತ್ತಿಗೆದಾರರು ಬಿಲ್ ಪಾವತಿಯಾಗದೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರಕ್ಕೆ ನಮ್ಮ ಕಷ್ಟ ತೀರಿಸಲು ಆಗದಿದ್ದರೆ ನಮಗೆ ಒಂದೊಂದು ಬಾಟಲ್ ವಿಷ ಕೊಟ್ಟುಬಿಡಿ, ಕುಡಿದು ಸತ್ತು ಹೋಗುತ್ತೇವೆ ಎಂದು ಅಸಮಾಧಾನ ಹೊರಹಾಕಿದ್ದರು.

ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಡಿ.ಕೆ. ಶಿವಕುಮಾರ್  ಅವರು ನಮ್ಮ ಪ್ರತಿಭಟನಾ ಸ್ಥಳಕ್ಕೆ ಬಂದು ನಿಮ್ಮ ಹೋರಾಟದಿಂದಲೇ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅಧಿಕಾರಕ್ಕೆ ಬಂದ ಮೇಲೆ ನಿಮಗೆ ಸಹಾಯ ಮಾಡದಿದ್ದರೆ ನಮಗೆ ಒಳ್ಳೆಯದಾಗಲ್ಲ ಎಂದು ಭರವಸೆ ನೀಡಿದ್ದರು. ಆದರೆ ಈಗ ಸರ್ಕಾರ ಬಂದ ಮೇಲೆ ನಮ್ಮನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಜೂನ್ ತಿಂಗಳಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಬಾಕಿ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಮೂರು ತಿಂಗಳಾದರೂ ಹಣ ಬಿಡುಗಡೆಯಾಗಿಲ್ಲ. ಇತ್ತೀಚೆಗೆ ಭೇಟಿಯಾದಾಗ ಡಿಕೆ ಶಿವಕುಮಾರ್‌ ಕನಿಷ್ಠ 5 ನಿಮಿಷವೂ ಸರಿಯಾಗಿ ಸಮಯ ಕೊಡದೆ ತಾತ್ಸಾರ ತೋರಿದ್ದಾರೆ. ಸಿಎಂ ತಮ್ಮದೇ ಲೋಕದಲ್ಲಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಹಿಂದೆ ಚುನಾವಣೆ ಬಂದಾಗ ಮಾತ್ರ ದುಡ್ಡು ಕೇಳುತ್ತಿದ್ದರು. ಆದರೆ ಈಗ ಶಾಸಕರು ಪ್ರತಿಯೊಂದು ಕಾಮಗಾರಿಯಲ್ಲೂ ಮೂಗು ತೂರಿಸುತ್ತಿದ್ದಾರೆ. ಟೆಂಡರ್ ಮಂಜೂರಾದ ತಕ್ಷಣ ಶಾಸಕರ ಬಳಿ ಹೋಗಬೇಕು, ಪೇಮೆಂಟ್ ಆದ ತಕ್ಷಣ ಅವರಿಗೆ ಪಾಲು ತಲುಪಿಸಬೇಕು. ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಮೂಲಕ 70% ರಷ್ಟು ಕಮಿಷನ್‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಸಿಎಂ ಜೊತೆ ಗುತ್ತಿಗೆದಾರರು ಚರ್ಚೆ ನಡೆಸಿದ್ದಾರೆ.


Spread the love

About Laxminews 24x7

Check Also

ನ.13 ರಂದೇ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ – ತೇಜಸ್ವಿ ಸೂರ್ಯ

Spread the loveಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟನೆ ಕುರಿತು ಹೊಸ ಅಪ್ಡೇಟ್‌ ಬಂದಿದೆ. ಬೆಂಗಳೂರು ದಕ್ಷಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ