Breaking News

ದರ್ಶನ್‌ಗಾಗಿ ಹರಕೆ ಹೊತ್ತ ವಿಜಯಲಕ್ಷ್ಮಿ- ತಿಪಟೂರಿನ ಚೌಲಿಹಳ್ಳಿ ಕರಿಕಲ್ಲಮ್ಮ ದೇವಾಲಯಕ್ಕೆ ಭೇಟಿ

Spread the love

ತುಮಕೂರು: ನಟ ದರ್ಶನ್ ಅವರಿಗೆ ಜಾಮೀನು ದೊರೆತು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿ ಎಂದು ಪ್ರಾರ್ಥಿಸಿ, ಪತ್ನಿ ವಿಜಯಲಕ್ಷ್ಮಿ ದರ್ಶನ್  ಅವರು ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಚೌಲಿಹಳ್ಳಿ ಗ್ರಾಮದೇವತೆ ಶ್ರೀ ಕರಿಕಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಚೌಲಿಹಳ್ಳಿ ಗ್ರಾಮದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮಿ, ಪತಿಗೆ ಜಾಮೀನು ಸಿಗಲಿ ಎಂದು ದೇವಿಯ ಬಳಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ದೇವರ ಅಪ್ಪಣೆ ಕೇಳಿದಾಗ, ದರ್ಶನ್ ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗುವ ಸೂಚನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ದರ್ಶನ್ ಬಿಡುಗಡೆಯಾದರೆ ಕುಟುಂಬ ಸಮೇತ ಭೇಟಿ
ದರ್ಶನ್ ಜೈಲಿನಿಂದ ಬಿಡುಗಡೆಯಾದ ಬಳಿಕ ಪತಿಯೊಂದಿಗೆ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಬಂದು ಹರಕೆ ತೀರಿಸುವುದಾಗಿ ವಿಜಯಲಕ್ಷ್ಮಿ ಹರಕೆ ಹೊತ್ತಿದ್ದಾರೆ ಎನ್ನಲಾಗಿದೆ.

ನಂತರ ದೇವಾಲಯದ ಧೂತಯ್ಯ ಸ್ವಾಮಿಯ ದರ್ಶನ ಪಡೆದ ವಿಜಯಲಕ್ಷ್ಮಿ, ಪ್ರದಕ್ಷಿಣೆ ಹಾಕಿದರು. ಈ ವೇಳೆ ಧೂತಯ್ಯ ಸ್ವಾಮಿ ಕುಟುಂಬಕ್ಕೆ ಅಭಯ ನೀಡಿದ್ದು, ದರ್ಶನ್ ಅವರಿಗೆ ಜಾಮೀನು ಸಿಗುವ ಬಗ್ಗೆ ಅಪ್ಪಣೆ ನೀಡಿದ್ದಾರೆ ಎಂದು ಭಕ್ತರು ತಿಳಿಸಿದ್ದಾರೆ.

ವಿಜಯಲಕ್ಷ್ಮಿ ದರ್ಶನ್ ದೇವಾಲಯಕ್ಕೆ ಭೇಟಿ ನೀಡಿದ ಸುದ್ದಿ ತಿಳಿದು ನೂರಾರು ದರ್ಶನ್ ಅಭಿಮಾನಿಗಳು ಚೌಲಿಹಳ್ಳಿಯ ಶ್ರೀ ಕರಿಕಲ್ಲಮ್ಮ ದೇವಾಲಯದ ಬಳಿ ಜಮಾಯಿಸಿದ್ದರು. ದೇವಾಲಯದ ಅರ್ಚಕರು ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದು, ಪೂಜಾ ಕಾರ್ಯಗಳಿಗೆ ಸಹಕರಿಸಿದರು.


Spread the love

About Laxminews 24x7

Check Also

ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ – ಎಂ.ಬಿ ಪಾಟೀಲ್

Spread the loveವಿಜಯಪುರ: ಇದೇ ಡಿಸೆಂಬರ್ ಅಂತ್ಯದೊಳಗೆ ವಿಜಯಪುರದಲ್ಲಿ ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ