Breaking News

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

Spread the love

ಬೆಂಗಳೂರು: ಕಳ್ಳತನಕ್ಕೆ ಬಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕನೊಬ್ಬ ತಪ್ಪಿಸಿಕೊಳ್ಳಲು ಯುವತಿಯನ್ನೇ ನಡು ರಸ್ತೆಯಲ್ಲಿ ಎಳೆದಾಡಿ ಬೆದರಿಸಿರುವ ಘಟನೆ ಬೆಂಗಳೂರಿನ ಇಂದಿರಾನಗರ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನನ್ನನ್ನು ಹಿಡಿಯಲು ಬಂದರೆ ಯುವತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಭುರಾಜ್ ಅಲಿಯಾಸ್ ರಾಜ್ ಬಂಧಿತ ಆರೋಪಿ. ಈತ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ನಾಲ್ಕು ದಿನಗಳ ಹಿಂದೆ ಕಳ್ಳತನಕ್ಕೆ ಬಂದಿದ್ದ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಯುವತಿಯನ್ನ ಎಳೆದಾಡಿ ಬೆದರಿಕೆ
ಸಾರ್ವಜನಿಕರಿಂದ ತಪ್ಪಿಸಿಕೊಳ್ಳಲು ಆರೋಪಿ ಅಂಗಡಿಯಲ್ಲಿದ್ದ ಯುವತಿಯೊಬ್ಬಳನ್ನು ಎಳೆದಾಡಿದ್ದಾನೆ. ಅಲ್ಲದೆ, ತನ್ನನ್ನು ಹಿಡಿಯಲು ಯಾರಾದರೂ ಬಂದರೆ ಯುವತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಆರೋಪಿಯ ಉಪಟಳ ಹೆಚ್ಚಾಗುತ್ತಿದ್ದಂತೆ ಸಾರ್ವಜನಿಕರು ಆತನ ಮೇಲೆ ದಾಳಿ ಮಾಡಿ ಹಿಡಿದಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಇಂದಿರಾನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿಯನ್ನು ಎಳೆದಾಡಿ ಬೆದರಿಕೆ ಹಾಕಿರುವ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.


Spread the love

About Laxminews 24x7

Check Also

ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ – ಎಂ.ಬಿ ಪಾಟೀಲ್

Spread the loveವಿಜಯಪುರ: ಇದೇ ಡಿಸೆಂಬರ್ ಅಂತ್ಯದೊಳಗೆ ವಿಜಯಪುರದಲ್ಲಿ ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ