ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು.
ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್ನಲ್ಲಿ ದಂಧೆ ನಡೆಸುತ್ತಿದ್ದರು. ಆನ್ಲೈನ್ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು, ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 6 ಮೊಬೈಲ್ ಫೋನ್ಗಳು, 500 ರೂಪಾಯಿ ಮುಖಬೆಲೆಯ 3 ನೋಟುಗಳು ಸೇರಿ ₹1500 ನಗದು ಹಾಗೂ ಕಾಂಡೋಮ್ಗಳನ್ನ ವಶಪಡಿಸಿಕೊಂಡಿದ್ದಾರೆ.