Breaking News

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಸ್‌ – ‘ಕೈ’ ನಾಯಕರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌

Spread the love

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ಕೊಟ್ಟಿದೆ. ಬಿಜೆಪಿ ಸರ್ಕಾರ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಹೈಕೋರ್ಟ್‌ ರದ್ದು ಮಾಡಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ಕೆಪಿಸಿಸಿ ಸಲ್ಲಿಸಿದ್ದ ಅರ್ಜಿಗೂ ಹೈಕೋರ್ಟ್ ಅಸ್ತು ಎಂದಿದೆ.

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಬಿಜೆಪಿ ಸರ್ಕಾರವನ್ನು ಶೇ.40 ಕಮಿಷನ್ ಸರ್ಕಾರ ಎಂದು ಟೀಕಿಸಿತ್ತು. ಕಾಮಗಾರಿಗಳ ಗುತ್ತಿಗೆ, ಸರ್ಕಾರಿ ಖರೀದಿಯಲ್ಲಿ ಕಮಿಷನ್ ಆರೋಪ ಮಾಡಿತ್ತು. ಬಿಜೆಪಿ ಸರ್ಕಾರ 1,500 ಕೋಟಿ ರೂ. ಲೂಟಿ ಮಾಡಿದೆ ಎಂದು ಜಾಹೀರಾತಿನಲ್ಲಿ ಆರೋಪಿಸಿತ್ತು. ಸರ್ಕಾರಿ ನೇಮಕಾತಿಯಲ್ಲಿ ಸ್ಕೋರ್ ಕಾರ್ಡ್, ರೇಟ್ ಕಾರ್ಡ್ ವ್ಯವಸ್ಥೆ ಎಂಬ ಆರೋಪ ಮಾಡಿತ್ತು.

ನೇಮಕಾತಿಗೆ ಲಂಚ ನೀಡಬೇಕಿತ್ತು ಎಂಬ ಆರೋಪವೂ ಕಾಂಗ್ರೆಸ್ ಜಾಹೀರಾತಿನಲ್ಲಿತ್ತು.‌ ಇದರ ವಿರುದ್ಧ 2023ರ ಮೇ ತಿಂಗಳಲ್ಲಿ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು. ದೂರಿನ ಆಧಾರದ ಮೇಲೆ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಾಗಿತ್ತು.‌


Spread the love

About Laxminews 24x7

Check Also

22 ವರ್ಷ ಹಳೆಯ NASA ಉಪಗ್ರಹ ಭೂಮಿಗೆ ವಾಪಸ್- ಬೆಂಗಳೂರಿನ ಮೇಲೂ ಬೀಳಲಿದೆಯೇ ಅವಶೇಷ?

Spread the love ವಾಷಿಂಗ್ಟನ್‌: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾಗೆ ಸೇರಿದ 22 ವರ್ಷ ಹಳೆಯ ಉಪಗ್ರಹವೊಂದು ಇಂದು ಭೂಮಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ