ರಾಮನಗರ: ಚನ್ನಪಟ್ಟಣ ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರಿದಿದೆ. ತಾಲೂಕಿನ ಸುಳ್ಳೇರಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ಗ್ರಾಮದ ನಿವಾಸಿ ಮುತ್ತುರಾಜು ಎಂಬವರ ಮನೆಯ ಬಳಿ ತಡರಾತ್ರಿ ಚಿರತೆಯೊಂದು ಓಡಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜನವಸತಿ ಪ್ರದೇಶದಲ್ಲೇ ಚಿರತೆ ಪ್ರತ್ಯಕ್ಷಗೊಂಡಿರುವುದರಿಂದ ಗ್ರಾಮಸ್ಥರು ರಾತ್ರಿ ವೇಳೆ ಹೊರಬರಲು ಹೆದರುವಂತಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಳೇರಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಭೀತಿ ಹೆಚ್ಚಾಗಿದ್ದು, ಅನಾಹುತ ಸಂಭವಿಸುವ ಮುನ್ನವೇ ಅರಣ್ಯ ಇಲಾಖೆ ಕೂಡಲೇ ಬೋನು ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Laxmi News 24×7