ಬೆಂಗಳೂರು: ನಮ್ಮ ಮೆಟ್ರೋ ಪಿಂಕ್ ಲೈನ್ನಲ್ಲಿ ಬರುವ ಕಾಡುಗೊಂಡನಹಳ್ಳಿ ನಿಲ್ದಾಣಕ್ಕೆ ‘ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣ’ ಎಂದು ಮರುನಾಮಕರಣ ಮಾಡಬೇಕೆಂದು ಕೋರಿ ಸಚಿವ ಜಮೀರ್ ಅಹ್ಮದ್
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಜಮೀರ್ ಅವರ ಈ ಮನವಿಗೆ ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಪ್ರದೇಶದ ಐತಿಹಾಸಿಕ ಮತ್ತು ಭೌಗೋಳಿಕ ಗುರುತನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಈ ಹೆಸರನ್ನು ಪರಿಗಣಿಸುವಂತೆ ಜಮೀರ್ ಅಹ್ಮದ್ ಆಗ್ರಹಿಸಿದ್ದಾರೆ
ಸಚಿವರ ಮನವಿಯನ್ನು ಪ್ರಶ್ನಿಸಿರುವ ಕನ್ನಡಪರ ಸಂಘಟನೆಗಳು, ಬೇಕಾದರೆ ಕಾಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಕನ್ನಡ ಏಕೀಕರಣ ಹೋರಾಟದಲ್ಲಿ ಹುತಾತ್ಮರಾದ ರಂಜಾನ್ ಸಾಬ್ ಅವರ ಹೆಸರನ್ನು ಇಡಿ ಎಂದು ಸಲಹೆ ನೀಡಿವೆ.
ಇನ್ನು ಇದೇ ನವೆಂಬರ್ 13 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಂಕ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಕೆಲವೇ ದಿನಗಳಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ.
Laxmi News 24×7