Breaking News

ಕಬ್ಬು ಬೆಳೆಗಾರರ ಹೋರಾಟಕ್ಕೆ ಮೊದಲ ಹಂತದ ಜಯ; ಗುರ್ಲಾಪುರದಲ್ಲಿ ರೈತರ ಸಂಭ್ರಮಾಚರಣೆ

Spread the love

ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಸತತ 12 ದಿನಗಳ ಕಾಲ ನಡೆದ ರೈತರ ಹೋರಾಟಕ್ಕೆ ಮೊದಲ ಹಂತದ ಯಶಸ್ಸು ದೊರೆತ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರು ವಿಜಯೋತ್ಸವ ಆಚರಿಸಿದರು.

ಹೋರಾಟದ ಸ್ಥಳದಲ್ಲಿಯೇ ಪಟಾಕಿ ಸಿಡಿಸಿ, ಪರಸ್ಪರ ಗುಲಾಲ್ ಎರಚಿ, ಸಿಹಿ ಹಂಚುವ ಮೂಲಕ ರೈತರು ಸಂಭ್ರಮಿಸಿದರು. ಈ ವೇಳೆ ರೈತ ಪರ ಘೋಷಣೆಗಳು ಮೊಳಗಿದವು.

ರೈತ ಮುಖಂಡರಾದ ಚೂನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಹೋರಾಟಗಾರರು ವಿಜಯೋತ್ಸವದಲ್ಲಿ ಪಾಲ್ಗೊಂಡರು. ರೈತರ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ₹3,600 ದರ ನಿಗದಿಪಡಿಸುವುದರ ಜತೆಗೆ ಸಕ್ಕರೆ ಮಾರಾಟದಿಂದ ಬರುವ ಲಾಭಾಂಶದಲ್ಲಿ ಶೇ.75ರಷ್ಟು ಪಾಲನ್ನು ರೈತರಿಗೆ ನೀಡುವ ಒಪ್ಪಂದಕ್ಕೆ ಬರಲಾಗಿದೆ. ಇದು ರೈತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಆದರೆ, ಈ ನಿರ್ಧಾರವೇ ಹೋರಾಟದ ಅಂತಿಮ ಜಯವಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ ಸರ್ಕಾರ ಹೆಚ್ಚುವರಿಯಾಗಿ ₹1,000 ಪ್ರೋತ್ಸಾಹಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದೊಳಗೆ ಈ ಬೇಡಿಕೆಯನ್ನು ಈಡೇರಿಸದಿದ್ದರೆ ಅಧಿವೇಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ, 12 ದಿನಗಳ ಹೋರಾಟದ ಬಳಿಕ ಗುರ್ಲಾಪುರದಲ್ಲಿ ವಿಜಯೋತ್ಸವದ ಸಂಭ್ರಮ ಮನೆಮಾಡಿದ್ದರೂ, ರೈತರ ಪ್ರಮುಖ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವ ಸಂಕಲ್ಪವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

3 ಕೋಟಿ ಮೌಲ್ಯದ ಆಸ್ತಿಗಾಗಿ ಬೆಂಗಳೂರಿನಲ್ಲಿ 7 ಜನರ ನರಮೇಧ!

Spread the love ಬೆಂಗಳೂರು: ರಾಜಧಾನಿಯನ್ನು ಬೆಚ್ಚಿಬೀಳಿಸಿದ ಏಳು ಜನರ ಭೀಕರ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸತ್ಯಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ