Breaking News

ಆಸ್ತಿ ಮಾರ್ಗಸೂಚಿ ಮೌಲ್ಯ ಶೇ. 40ರಷ್ಟು ಹೆಚ್ಚಳಕ್ಕೆ ಕ್ರೆಡಾಯ್ ಆಕ್ಷೇಪ

Spread the love

ಬೆಳಗಾವಿ: ನಗರದ ಆಸ್ತಿ ಮಾರ್ಗಸೂಚಿ ಮೌಲ್ಯವನ್ನು ಶೇ. 40ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಬೆಳಗಾವಿ ಕ್ರೆಡಾಯ್  ತೀವ್ರ ವಿರೋಧ ವ್ಯಕ್ತಪಡಿಸಿದೆ. ವಾಸ್ತವಿಕ ಮಾರುಕಟ್ಟೆ ಪರಿಸ್ಥಿತಿಯನ್ನು ಪರಿಶೀಲಿಸದೆ ಹಾಗೂ ಸಂಬಂಧಪಟ್ಟವರೊಂದಿಗೆ ಸಮರ್ಪಕ ಚರ್ಚೆ ನಡೆಸದೆ ಇಂತಹ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಸಂಘಟನೆ ಆಕ್ಷೇಪಿಸಿದೆ.

ಆಸ್ತಿ ಮಾರ್ಗಸೂಚಿ ಮೌಲ್ಯ ಪರಿಷ್ಕರಣೆ ಸಂಬಂಧ ಕ್ರೆಡಾಯ್ ಸದಸ್ಯರು ತಹಸೀಲ್ದಾರ್ ಹಾಗೂ ಉಪನೋಂದಣಾಧಿಕಾರಿಗಳೊಂದಿಗೆ ಸಭೆ ನಡೆಸಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಈ ವೇಳೆ ಪ್ರಸ್ತಾವಿತ ಶೇ. 40ರಷ್ಟು ಹೆಚ್ಚಳಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಮೌಲ್ಯ ಹೆಚ್ಚಳದ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದರು.

ಮಾರ್ಗಸೂಚಿ ಮೌಲ್ಯದಲ್ಲಿ ಭಾರಿ ಪ್ರಮಾಣದ ಹೆಚ್ಚಳವಾದರೆ ಮನೆ ಮತ್ತು ನಿವೇಶನಗಳ ನೋಂದಣಿ ವೆಚ್ಚ ಹೆಚ್ಚಾಗಲಿದೆ. ಇದರಿಂದ ಮಧ್ಯಮ ವರ್ಗದವರು ಸೇರಿದಂತೆ ಸಾಮಾನ್ಯ ಆಸ್ತಿ ಖರೀದಿದಾರರಿಗೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ಅಲ್ಲದೆ, ಆಸ್ತಿ ಖರೀದಿ ಮತ್ತು ಮಾರಾಟ ವ್ಯವಹಾರಗಳ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಿ ರಿಯಲ್ ಎಸ್ಟೇಟ್ ಕ್ಷೇತ್ರದ ಬೆಳವಣಿಗೆ ಕುಂಠಿತಗೊಳ್ಳುವ ಸಾಧ್ಯತೆಯಿದೆ ಎಂದು ಕ್ರೆಡಾಯ್ ಸದಸ್ಯರು ಆತಂಕ ವ್ಯಕ್ತಪಡಿಸಿದರು.

ನಗರದ ನೈಜ ಮಾರುಕಟ್ಟೆ ದರ, ಜನರ ಖರೀದಿ ಸಾಮರ್ಥ್ಯ ಹಾಗೂ ರಿಯಲ್ ಎಸ್ಟೇಟ್ ವಲಯದ ಸ್ಥಿತಿಗತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿದ ಬಳಿಕವೇ ಮಾರ್ಗಸೂಚಿ ಮೌಲ್ಯ ಪರಿಷ್ಕರಣೆ ಮಾಡಬೇಕು. ಈ ಪ್ರಕ್ರಿಯೆಯಲ್ಲಿ ರಿಯಲ್ ಎಸ್ಟೇಟ್ ಪ್ರತಿನಿಧಿಗಳು ಸೇರಿದಂತೆ ಎಲ್ಲ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿ ಜನಸಾಮಾನ್ಯರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಕ್ರೆಡಾಯ್ ಆಗ್ರಹಿಸಿದೆ.


Spread the love

About Laxminews 24x7

Check Also

3 ಕೋಟಿ ಮೌಲ್ಯದ ಆಸ್ತಿಗಾಗಿ ಬೆಂಗಳೂರಿನಲ್ಲಿ 7 ಜನರ ನರಮೇಧ!

Spread the love ಬೆಂಗಳೂರು: ರಾಜಧಾನಿಯನ್ನು ಬೆಚ್ಚಿಬೀಳಿಸಿದ ಏಳು ಜನರ ಭೀಕರ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸತ್ಯಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ