Breaking News

ದೀಪಾವಳಿ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು

Spread the love

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು  ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚರಿಸಲಿವೆ.

ದೀಪಾವಳಿ ಹಬ್ಬದ ವೇಳೆ ರಾಜ್ಯದ ಜನತೆಗೆ ಊರುಗಳಿಗೆ ತೆರಳಲು ಅನುಕೂಲವಾಗಲೆಂದು ರಾಜಧಾನಿ ಬೆಂಗಳೂರಿನಿಂದ ಬೆಳಗಾವಿವರೆಗೆ ವಿಶೇಷ ರೈಲು ಓಡಿಸುವಂತೆ ಸಚಿವ ಪ್ರಹ್ಲಾದ್‌ ಜೋಶಿ ಅವರು ನೈರುತ್ಯ ರೈಲ್ವೆ ಅಧಿಕಾರಿಗಳ ಜೊತೆ ಚರ್ಚಿಸಿದ್ದರು. ಸಚಿವರ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ ಎರಡು ವಿಶೇಷ ರೈಲು ಸಂಚಾರ ಕಲ್ಪಿಸಿದೆ.

ದೀಪಾವಳಿ ಹಬ್ಬದ ವೇಳೆ ಬೆಂಗಳೂರಿನ ಸರ್ ಎಂ. ವಶ್ವೇಶ್ವರಯ್ಯ ಟರ್ಮಿನಲ್ ಹಾಗೂ ಬೆಳಗಾವಿ ನಿಲ್ದಾಣಗಳ ನಡುವೆ ತಲಾ ಎರಡು ಟ್ರಿಪ್‌ಗಳಂತೆ ವಿಶೇಷ ರೈಲು ಸಂಚರಿಸಲಿವೆ. ಬೆಂಗಳೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ- ಧಾರವಾಡ ಮಾರ್ಗವಾಗಿ ಬೆಳಗಾವಿವರೆಗೆ ಸಂಚರಿಸಲಿದೆ.

ನವೆಂಬರ್ 7 ಮತ್ತು 9ರಂದು ಸಂಜೆ 7 ಗಂಟೆಗೆ 06551 ಸಂಖ್ಯೆಯ ವಿಶೇಷ ರೈಲು ಬೆಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 8:25ಕ್ಕೆ ಬೆಳಗಾವಿ ತಲುಪಲಿದೆ. 06552 ಸಂಖ್ಯೆಯ ಮತ್ತೊಂದು ವಿಶೇಷ ರೈಲು ನವೆಂಬರ್ 8 ಮತ್ತು 10ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 5 ಗಂಟೆಗೆ ಬೆಂಗಳೂರು ತಲುಪಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಸಂಚರಿಸಲಿರುವ ಈ ವಿಶೇಷ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೊಂಡಾ ಹಾಗೂ ಖಾನಾಪುರ ರೈಲ್ವೆ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.


Spread the love

About Laxminews 24x7

Check Also

ಬೆಂಗ್ಳೂರು ಸರಣಿ ಹತ್ಯೆ ಕೇಸ್ – ನರಹಂತಕ ಇಂದುಶೇಖರ್ 14 ದಿನ ಪೊಲೀಸ್‌ ಕಸ್ಟಡಿಗೆ

Spread the loveಬೆಂಗಳೂರು: ನಗರದಲ್ಲಿ  ನಡೆದ ಸರಣಿ ಹತ್ಯೆ ಪ್ರಕರಣದ ಆರೋಪಿ ಇಂದುಶೇಖರ್‌ನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ