Breaking News

ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ

Spread the love

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಬೆಂಬಲ ನೀಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ವೇಳೆ ಶ್ರೀ ಮರುಳಾರಾಧ್ಯ ಸ್ವಾಮೀಜಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಶ್ಯಾಳ ಗ್ರಾಮದ ಮಠದ ಮರುಳಾರಾಧ್ಯ ಸ್ವಾಮೀಜಿ, ರೈತರ ಸಮಸ್ಯೆ ಪರಿಹಾರದ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರವನ್ನು ಪ್ರಶ್ನಿಸಿ ವಾಗ್ದಾಳಿ ನಡೆಸಿದರು.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ವಿಚಾರ ಬಂದಾಗ ಎಲ್ಲರೂ ಜಿಲ್ಲಾಧಿಕಾರಿ ಮತ್ತು ಶಾಸಕರ ಹೆಸರನ್ನು ಹೇಳುತ್ತಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರೇನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ವಾಗ್ದಾಳಿ ನಡೆಸಿದರು.

‘‘ಬೇರೆ ವಿಚಾರಗಳೇನೇ ಇದ್ದರೂ ಪ್ರತಿಕ್ರಿಯೆ ನೀಡುತ್ತಾರೆ. ಹೇಳಿಕೆ ಕೊಡುತ್ತಾರೆ. ಆದರೆ, ರೈತರ ವಿಚಾರ ಬಂದಾಗ ಉಸ್ತುವಾರಿ ಸಚಿವರು ಊಟ ಮಾಡಿ ಮಲಗಿದ್ದಾರಾ? ರೈತರ ಸಮಸ್ಯೆ ಬಗೆಹರಿಸಲು ಅವರಿಗೆ ಕುಂ..ಆಗ ಧಮ್ ಇಲ್ಲವೇ’’ ಎಂದು ಮರುಳಾರಾಧ್ಯ ಸ್ವಾಮೀಜಿ ಪ್ರಶ್ನಿಸಿದರು. ಸದ್ಯ ಈ ಹೇಳಿಕೆಯ ವಿಡಿಯೋ ವೈರಲ್ ಆಗುದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಮಹಾರಾಜರು ಅರಮನೆ ಕಟ್ಟಿಸಿದ್ದು ಜನರ ತೆರಿಗೆಯ ಹಣದಿಂದಲೇ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

Spread the loveಮೈಸೂರು: ಮಹಾರಾಜರು ಅರಮನೆ ಕಟ್ಟಿಸಿದ್ದು ಕೂಡ ಜನರ ತೆರಿಗೆಯ ಹಣದಿಂದಲೇ, ಹೀಗಾಗಿ ಎಲ್ಲವೂ ಜನರಿಗೇ ಸೇರಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ