Breaking News

ಸುಂಟಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಾಟ್ ಜಿಪಿಟಿ ಬಳಸಿ ಔಷಧಿ ಬರೆದುಕೊಡ್ತಿದ್ದಾರಂತೆ ಮೆಡಿಕಲ್ ಸ್ಟೂಡೆಂಟ್ಸ್‌!

Spread the love

ಮಡಿಕೇರಿ: ಕೊಡಗಿನ  ಸುಂಟಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ  ಮೇಜರ್ ಸರ್ಜರಿಯೇ ಬೇಕಾಗಿದೆ. ಬಡವರ ಪಾಲಿನ ಸಂಜೀವಿನಿಯಾಗಬೇಕಿದ್ದ ಆಸ್ಪತ್ರೆ ಇಂದು ಅವ್ಯವಸ್ಥೆಯ ಸುಳಿಯಲ್ಲಿ ಸಿಲುಕಿದೆ. ವೈದ್ಯರು, ಸಿಬ್ಬಂದಿ ಕೊರತೆ ಜೊತೆಗೆ ಮೂಲಸೌಕರ್ಯಗಳ ನಿರ್ಲಕ್ಷ್ಯದಿಂದ ರೋಗಿಗಳು ಪರದಾಡುವಂತಾಗಿದೆ. ಇನ್ನೂ ಆಸ್ಪತ್ರೆಯಲ್ಲಿರುವ ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿಗಳು ಚಾಟ್ ಜಿಪಿಟಿ ಬಳಸಿ ಔಷಧಿ ಬರೆದುಕೊಡ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಈ ಆಸ್ಪತ್ರೆ ಅಪಘಾತಗಳು ಸಂಭವಿಸಿದಾಗಲೂ, ಕಾಡಾನೆಗಳ ಹಾವಳಿಯಿಂದ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲೂ ಅತ್ಯಂತ ಮಹತ್ವದ್ದಾಗಿದೆ. ಆದರೆ ಇಂತಹ ಪ್ರಮುಖ ಆಸ್ಪತ್ರೆಯ ನಿರ್ವಹಣೆ ಮಾತ್ರ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂಬ ಆರೋಪ ಕೇಳಿಬಂದಿದೆ. ಒಮ್ಮೆ ಆಸ್ಪತ್ರೆಯ ಆವರಣದತ್ತ ಕಣ್ಣಾಡಿಸಿದರೆ ಆಸ್ಪತ್ರೆಯ ಸುತ್ತಮುತ್ತ ಎಲ್ಲೆಂದರಲ್ಲಿ ಬೆಳೆದು ನಿಂತಿರುವ ಗಿಡಗಂಟಿಗಳು, ಕಾಡಿನಂತಾಗಿರುವ ಪರಿಸರ ಕಾಣುತ್ತದೆ. ವಿಷಜಂತುಗಳ ಓಡಾಟಕ್ಕೂ ಇಲ್ಲಿ ಅವಕಾಶ ಮಾಡಿಕೊಟ್ಟಂತಿದೆ. ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಆತಂಕದಿಂದಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಹಳೆಯ ವಾರ್ಡ್‌ಗಳ ಸ್ಥಿತಿ ಹೇಳತೀರದಾಗಿದೆ. ಸರಿಯಾದ ನಿರ್ವಹಣೆ ಇಲ್ಲದೆ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪುತ್ತಿವೆ. ಆಸ್ಪತ್ರೆಯ ಮುಂಭಾಗ ಮಾತ್ರ ಸುಂದರವಾಗಿ ಕಾಣಿಸಿದರೂ ಒಳಗೆ ಕಾಲಿಟ್ಟರೆ ಅವ್ಯವಸ್ಥೆಯ ಚಿತ್ರಣ ಎದುರಾಗುತ್ತದೆ.

ಇಷ್ಟಕ್ಕೇ ಮುಗಿಯುವುದಿಲ್ಲ ಆಸ್ಪತ್ರೆಯ ಅವ್ಯವಸ್ಥೆ! ರೋಗಿಗಳಿಗೆ ನೀಡಬೇಕಾದ ಇಂಜೆಕ್ಷನ್‌ಗಳು ಹಾಗೂ ಮಾತ್ರೆಗಳನ್ನು ಸರಿಯಾಗಿ ವಿಂಗಡಿಸಿ ಸಂಗ್ರಹಿಸಿಡಬೇಕಾದ ಔಷಧಿಗಳನ್ನು ಬೇಕಾಬಿಟ್ಟಿಯಾಗಿ ಇಟ್ಟಿರುವ ದೃಶ್ಯಗಳು ಪಬ್ಲಿಕ್ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಔಷಧಿಗಳ ಸುರಕ್ಷತೆ ಮತ್ತು ನಿರ್ವಹಣೆಯ ಹೊಣೆ ಯಾರದ್ದು? ರೋಗಿಗಳ ಆರೋಗ್ಯದ ವಿಚಾರದಲ್ಲಿ ಇಷ್ಟೊಂದು ನಿರ್ಲಕ್ಷ್ಯ ಏಕೆ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ. ಇನ್ನು ಆಸ್ಪತ್ರೆಯ ವೈದ್ಯರ ವಸತಿಗೃಹಗಳ ಸ್ಥಿತಿಯೂ ಭಿನ್ನವಾಗಿಲ್ಲ. ಆಸ್ಪತ್ರೆಯಿಂದ ಸ್ವಲ್ಪ ದೂರದಲ್ಲಿರುವ ವೈದ್ಯರ ವಸತಿಗೃಹಗಳು ಕೂಡ ಗಿಡಗಂಟಿಗಳಿಂದ ಆವೃತವಾಗಿವೆ.

ಖಾಯಂ ವೈದ್ಯರು ಹಾಗೂ ಅಗತ್ಯ ನರ್ಸಿಂಗ್ ಸಿಬ್ಬಂದಿಯ ಕೊರತೆಯೂ ರೋಗಿಗಳ ಸಂಕಷ್ಟವನ್ನು ಹೆಚ್ಚಿಸಿದೆ ಎಂಬ ಆರೋಪ ಕೇಳಿಬಂದಿದೆ. ಇನ್ನೊಂದು ಗಂಭೀರ ಆರೋಪವೂ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಇರುವ ಹಿನ್ನೆಲೆಯಲ್ಲಿ, ಕೆಲ ವಿದ್ಯಾರ್ಥಿಗಳು ಚಾಟ್‌ ಜಿಪಿಟಿ ಸೇರಿದಂತೆ ಆನ್‌ಲೈನ್ ಮಾಹಿತಿಯನ್ನು ಅವಲಂಬಿಸಿ ಔಷಧಿಗಳನ್ನು ಬರೆದುಕೊಡುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.


Spread the love

About Laxminews 24x7

Check Also

ಮಹಾರಾಜರು ಅರಮನೆ ಕಟ್ಟಿಸಿದ್ದು ಜನರ ತೆರಿಗೆಯ ಹಣದಿಂದಲೇ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

Spread the loveಮೈಸೂರು: ಮಹಾರಾಜರು ಅರಮನೆ ಕಟ್ಟಿಸಿದ್ದು ಕೂಡ ಜನರ ತೆರಿಗೆಯ ಹಣದಿಂದಲೇ, ಹೀಗಾಗಿ ಎಲ್ಲವೂ ಜನರಿಗೇ ಸೇರಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ