ಹಾಸನ: ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಅಪ್ಪೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಪ್ರೀತ್ (35) ಮೃತಪಟ್ಟ ಯುವಕ. ಮನೆಯ ಹಿಂಭಾಗದಲ್ಲೇ ಹೈಟೆನ್ಷನ್ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದು, ಸುಪ್ರೀತ್ ಜಾನುವಾರುಗಳನ್ನು ಹಿಡಿದುಕೊಂಡು ಜಮೀನಿನ ಬಳಿಗೆ ತೆರಳುತ್ತಿದ್ದ ವೇಳೆ ಕಾಣದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದು, ಸುಪ್ರೀತ್ ಜಾನುವಾರುಗಳನ್ನು ಹಿಡಿದುಕೊಂಡು ಜಮೀನಿನ ಬಳಿಗೆ ತೆರಳುತ್ತಿ ವಿದ್ಯುತ್ ತಂತಿ ತುಳಿದಿದ್ದು ವಿದ್ಯುತ್ ಶಾಕ್ನಿಂದ ಸ್ಥಳದಲ್ಲೇ ಸುಪ್ರೀತ್ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ ಹತ್ತು ವರ್ಷದ ಹಿಂದೆ ಸುಪ್ರೀತ್ ತಂದೆ ರಂಗಸ್ವಾಮಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದರು.
Laxmi News 24×7