Breaking News

ಪಿಜಿ ವೈದ್ಯಕೀಯ; ಮೊದಲ ಸುತ್ತಿನ ಫಲಿತಾಂಶ ಪ್ರಕಟ, 3,268 ಸೀಟು ಹಂಚಿಕೆ: ಕೆಇಎ

Spread the love

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್  ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಿದ್ದು, ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಈ ಸುತ್ತಿನಲ್ಲಿ ಒಟ್ಟು 4,388 ಸೀಟುಗಳ ಪೈಕಿ 3,268 ಸೀಟು ಹಂಚಿಕೆಯಾಗಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.  

ಸೀಟು ಹಂಚಿಕೆಯಾದವರು ನ.11ರವರೆಗೆ ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಚಾಯ್ಸ್- 1 ಮತ್ತು 2 ದಾಖಲಿಸಿದವರು ನ.11ರವರೆಗೆ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ನ.12ರೊಳಗೆ ಶುಲ್ಕ ಪಾವತಿಸಬೇಕು ಎಂದು ಅವರು ತಿಳಿಸಿದ್ದಾರೆ.

ಚಾಯ್ಸ್-1 ದಾಖಲಿಸಿದವರು, ಶುಲ್ಕ ಪಾವತಿ ನಂತರ ನ.13ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಿದ ನಂತರ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ನ.14ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.


Spread the love

About Laxminews 24x7

Check Also

ಮಹಾರಾಜರು ಅರಮನೆ ಕಟ್ಟಿಸಿದ್ದು ಜನರ ತೆರಿಗೆಯ ಹಣದಿಂದಲೇ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

Spread the loveಮೈಸೂರು: ಮಹಾರಾಜರು ಅರಮನೆ ಕಟ್ಟಿಸಿದ್ದು ಕೂಡ ಜನರ ತೆರಿಗೆಯ ಹಣದಿಂದಲೇ, ಹೀಗಾಗಿ ಎಲ್ಲವೂ ಜನರಿಗೇ ಸೇರಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ