ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ಬೆಟ್ಟ ಹತ್ತುವಾಗ ಹೃದಯಾಘಾತಕ್ಕೊಳಗಾಗಿ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಸಮೀಪದ ಕನ್ಯಾಡಿ ನಿವಾಸಿ ಲಕ್ಷ್ಮಣ್ (32) ಮೃತ ದುರ್ದೈವಿ. ಬೆಟ್ಟ ಹತ್ತುವ ವೇಳೆ ಹೃದಯಾಘಾತಕ್ಕೊಳಗಾದ ಲಕ್ಷ್ಮಣ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ದೇವಿರಮ್ಮನ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಈ ದೇವಿರಮ್ಮನ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಪುರಾಣ ಪ್ರಸಿದ್ಧವಾದ ಈ ಪುಣ್ಯ ಕ್ಷೇತ್ರಕ್ಕೆ ಮೈಸೂರು ಅರಸರ ಮನೆಯಿಂದ ಇಂದಿಗೂ ದೇವಿಗೆ ಒಪ್ಪಿಸಲಾಗುವ ಮಡಿಲಕ್ಕಿ ಸೇವೆ ಈ ಐತಿಹಾಸಿಕ ಜಾತ್ರೆಯ ಧಾರ್ಮಿಕ ಪರಂಪರೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಬಾರಿ ಭಕ್ತರ ಅನುಕೂಲಕ್ಕಾಗಿ ಸತತ ಎರಡು ದಿನಗಳ ಕಾಲ ಬೆಟ್ಟ ಏರಲು ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲಾಡಳಿತದ ಸೂಚನೆಯಂತೆ ಹಗಲಿನಲ್ಲಿ ಮಾತ್ರ ಭಕ್ತರು ಬೆಟ್ಟ ಏರುತ್ತಾರೆ.
Laxmi News 24×7