Breaking News

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the love

ಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಲೂಕಿನ ಇಸ್ಮಾಯಿಲ್ ಹುಲಗೂರ (65) ಬಂಧಿತ ಆರೋಪಿ. ಆರನೇ ತರಗತಿಯ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದು, ಆಕೆ ಪರಿಶಿಷ್ಟ ಪಂಗಡಕ್ಕೆ ಸೇರಿದವಳಾಗಿದ್ದಾಳೆ. ಬಾಲಕಿಯನ್ನು ಪುಸಲಾಯಿಸಿ ಚಾಕು ತೋರಿಸಿ ಲೈಗಿಂಕ ದೌರ್ಜನ್ಯ ಎಸಗಿದ್ದಾನೆ. ಮನೆಯವರಿಗೆ ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತೆ ಈಗ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಇನ್ನೊಂದು ವಾರದಲ್ಲಿ ಹೆರಿಗೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗಳು ಗರ್ಭಿಣಿಯಾಗಿರುವ ಸಂಗತಿ ಮನೆಯವರಿಗೆ ತಿಳಿದೇ ಇರಲಿಲ್ಲ. ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ವಿಷಯ ಬಹಿರಂಗವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ದಲಿತ ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇಂತಹ ಹೀನಕೃತ್ಯ ಎಸಗಿದ ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿವೆ.


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ