Breaking News

ಬೆಂಗಳೂರಲ್ಲಿ ದೀಪಾವಳಿ ಪಟಾಕಿ ಅವಘಡ; ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಗರ್ಭಿಣಿ

Spread the love

ಬೆಂಗಳೂರು: ನಗರದಲ್ಲಿ ದೀಪಾವಳಿ ಪಟಾಕಿ ಅವಘಡಕ್ಕೆ ಇಂದು ಕೂಡ 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಟಾಕಿ ಸಿಡಿದು ಗರ್ಭಿಣಿ ಗಂಭೀರ ಗಾಯಗೊಂಡಿದ್ದಾರೆ.

ಪಟಾಕಿಯಿಂದ ಗಾಯಗೊಂಡು ನಾರಾಯಣ ನೇತ್ರಾಲಯದಲ್ಲಿ ದಾಖಲಾದವರ ಸಂಖ್ಯೆ 48 ಕ್ಕೆ ಏರಿಕೆಯಾಗಿದೆ. 22 ಮಂದಿ ವಯಸ್ಕರು, 26 ಮಕ್ಕಳು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದೆ.

ಮತ್ತೊಂದು ಕಡೆ ದೇಹ ಸುಟ್ಟುಕೊಂಡವರ ಸಂಖ್ಯೆಯೂ ಏರಿಕೆಯಾಗಿದೆ. ವಿಕ್ಟೋರಿಯಾ ಸುಟ್ಟಗಾಯ ವಿಭಾಗದಲ್ಲಿ ರೋಗಿಗಳು ದಾಖಲಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 8 ಜನರಿಗೆ ಸುಟ್ಟು ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. 8 ವರ್ಷದ ಬಾಲಕನಿಗೂ ಗಂಭೀರ ಗಾಯವಾಗಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಮಿಂಟೋ ಆಸ್ಪತ್ರೆಯಲ್ಲಿ ಗಾಯಗೊಂಡವರ ಸಂಖ್ಯೆ 36 ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆಯಿಂದ ಇಲ್ಲಿಯ ತನಕ 8 ಜನ ಗಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡ್ರಾಗನ್ ಚಾಕು ಹಿಡಿದು ತಿರುಗುತ್ತಿದ್ದ ಇಬ್ಬರ ಬಂಧನ

Spread the loveಬೆಳಗಾವಿ: ನಗರದಲ್ಲಿ ಹೆಚ್ಚುತ್ತಿರುವ ಚಾಕು ಇರಿತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಮಾರ್ಕೆಟ್ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ