Breaking News

ಪಡಿತರ ಚೀಟಿದಾರರಿಗೆ ಸರ್ಕಾರ ಗುಡ್‌ ನ್ಯೂಸ್‌ – ನ.30 ರವರೆಗೆ ಇ-ಕೆವೈಸಿ ಅವಧಿ ವಿಸ್ತರಣೆ

Spread the love

ಬೆಂಗಳೂರು: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಇ-ಕೆವೈಸಿಗೆ  ನೀಡಿದ್ದ ಗಡುವನ್ನು ಸರ್ಕಾರ ವಿಸ್ತರಿಸಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ನವೆಂಬರ್ 30 ರವರೆಗೂ ಇ-ಕೆವೈಸಿ ಅವಧಿ ವಿಸ್ತರಣೆ ಮಾಡಿದೆ. ನ.30 ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ.

ಯೋಜನೆಗಳ ಸೌಲಭ್ಯಗಳು ನಿರಂತರವಾಗಿ ಮುಂದುವರಿಯಲು, ಬಾಕಿ ಇರುವ ಎಲ್ಲಾ ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಮರು ಇ- ಕೆವೈಸಿ ಮಾಡಿಸಿಕೊಳ್ಳಲು ಇಲಾಖೆ ಸೂಚನೆ ನೀಡಿದೆ.

ನ.10 ರವರೆಗೂ ಇ-ಕೆವೈಸಿಗೆ ಅವಕಾಶ ನೀಡಲಾಗಿತ್ತು. 2.67 ಕೋಟಿ ಫಲಾನುಭವಿಗಳ ಪೈಕಿ 2.27 ಲಕ್ಷ ಫಲಾನುಭವಿಗಳು ಇ-ಕೆವೈಸಿ ‌ಮಾಡಿಸಿದ್ದಾರೆ. ಇನ್ನೂ‌ 39 ಲಕ್ಷ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಲ್ಲ. ಉಳಿದವರಿಗೂ ಅನುಕೂಲ ಆಗಲೆಂದು ಇಲಾಖೆ ಅವಧಿ ವಿಸ್ತರಿಸಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆಯಾದ ನವವಿವಾಹಿತೆ ಆತ್ಮಹತ್ಯೆ – ವರದಕ್ಷಿಣೆ ಕಿರುಕುಳ ಆರೋಪ

Spread the loveಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮದುವೆಯಾಗಿ ವರ್ಷ ಕಳೆಯುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ