Breaking News

ವಿದ್ಯುತ್ ಅವಘಡದಲ್ಲಿ ಯುವಕ ಸಾವು – ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೆಲ್ದಾಳೆ

Spread the love

ಬೀದರ್: ವಿದ್ಯುತ್ ಅವಘಡದಲ್ಲಿ ಮೃತ ಯುವಕನ ಕುಟುಂಬಸ್ಥರಿಗೆ ಶಾಸಕ ಶೈಲೇಂದ್ರ ಬೆಲ್ದಾಳೆ  ಅವರಿಂದು 5 ಲಕ್ಷ ರೂ. ಮೊತ್ತದ ಪರಿಹಾರದ ಚೆಕ್ ವಿತರಿಸಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬರೂರ ಗ್ರಾಮದ ರೋಷನ್ ಎಂಬ ಯುವಕ ವಿದ್ಯುತ್ ಅವಘಡದಲ್ಲಿ ಮೃತಪಟ್ಟಿದ್ದ. ಮೃತ ಯುವಕನ ಕುಟುಂಬಕ್ಕೆ ಜೆಸ್ಕಾಂ ಇಲಾಖೆಯ ವತಿಯಿಂದ 5 ಲಕ್ಷ ರೂ. ಪರಿಹಾರ ಮಂಜೂರಾಗಿದೆ. ಈ ಹಿನ್ನೆಲೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಮೃತ ಯುವಕನ ತಾಯಿಗೆ 5 ಲಕ್ಷ ರೂ. ಮೊತ್ತದ ಪರಿಹಾರದ ಚೆಕ್ ನೀಡಿದರು. 

ಬೀದರ್ ನಗರದ ಪ್ರತಾಪ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಪರಿಹಾರದ ಚೆಕ್ ವಿತರಿಸಿ, ಮೃತ ಯುವಕನ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು. ಮಗನನ್ನು ಕಳೆದುಕೊಂಡ ತಾಯಿಯ ನೋವಿನಲ್ಲಿ ಭಾಗಿಯಾದ ಶಾಸಕರು, ಕುಟುಂಬದ ಸಂಕಷ್ಟದ ಸಂದರ್ಭದಲ್ಲಿ ಧೈರ್ಯ ತುಂಬಿ, ಸಾಂತ್ವನ ಹೇಳಿದರು.

ವಿದ್ಯುತ್ ಅವಘಡದಿಂದ ಯುವಕನ ಅಕಾಲಿಕ ಸಾವು ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತ ಕುಟುಂಬಕ್ಕೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ಮೂಲಕ ದೊರೆಯಬೇಕಾದ ಪರಿಹಾರ ಮತ್ತು ನೆರವು ತಲುಪಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜೆಸ್ಕಾಂ ಇಲಾಖೆಯ ವತಿಯಿಂದ ಮಂಜೂರಾದ ಪರಿಹಾರದ ಮೊತ್ತವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.


Spread the love

About Laxminews 24x7

Check Also

ಪ್ರೀತಿಸಿ ಮದುವೆಯಾದ ನವವಿವಾಹಿತೆ ಆತ್ಮಹತ್ಯೆ – ವರದಕ್ಷಿಣೆ ಕಿರುಕುಳ ಆರೋಪ

Spread the loveಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮದುವೆಯಾಗಿ ವರ್ಷ ಕಳೆಯುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ