Breaking News

ಹಬ್ಬದೂಟಕ್ಕೆ ಹೊರಟಿದ್ದಾಗ ಬೈಕ್‌ ಅಪಘಾತ – ಮಗಳು ಸಾವು, ತಂದೆ ಸ್ಥಿತಿ ಗಂಭೀರ

Spread the love

ಚಿಕ್ಕಮಗಳೂರು: ಸಂಬಂಧಿಯೊಬ್ಬರ ಮನೆಗೆ ದೀಪಾವಳಿ  ಹಬ್ಬಕ್ಕೆ ಹೊರಟಿದ್ದಾಗ ಬೈಕ್‌ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಘಟನೆ ತರೀಕೆರೆ  ತಾಲೂಕಿನ ಭೈರಾಪುರ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಬೈಕ್‌ ಚಲಾಯಿಸುತ್ತಿದ್ದ ಯುವತಿಯ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಾಂತಿನಗರ ನಿವಾಸಿ ದ್ರಾಕ್ಷಾಯಿಣಿ (20) ಮೃತ ದುರ್ದೈವಿ. ಯುವತಿಯ ತಂದೆ ರಮೇಶ್ ಸ್ಥಿತಿ ಗಂಭೀರವಾಗಿದೆ. ಗಾಯಾಳು ರಮೇಶ್‌ ಅವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಂದೆ ಹಾಗೂ ಮಗಳು ಶಾಂತಿನಗರದಿಂದ ಎಂ.ಸಿ.ಹಳ್ಳಿ ಗ್ರಾಮಕ್ಕೆ ಸಂಬಂಧಿಯೊಬ್ಬರ ಮನೆಗೆ ಹಬ್ಬಕ್ಕೆ ತೆರಳುವಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆಯಾದ ನವವಿವಾಹಿತೆ ಆತ್ಮಹತ್ಯೆ – ವರದಕ್ಷಿಣೆ ಕಿರುಕುಳ ಆರೋಪ

Spread the loveಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮದುವೆಯಾಗಿ ವರ್ಷ ಕಳೆಯುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ