Breaking News

ಜೈಲಲ್ಲೇ ಪೋಕ್ಸೊ ಆರೋಪಿಗಳಿಂದ ಹುಚ್ಚಾಟ – ಜೈಲರ್‌ಗೆ ಜೀವ ಬೆದರಿಕೆ

Spread the love

ಚಿಕ್ಕಮಗಳೂರು: ಇಲ್ಲಿನ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಗಲಾಟೆ ಮಾಡಿ, ಮಹಿಳಾ ಜೈಲರ್ ಮತ್ತು ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿದ್ದಾರೆ.

ಜೈಲಿನ ಬ್ಯಾರಕ್‌ 1 ರಲ್ಲಿ ನ.9ರ ರಾತ್ರಿ ಊಟದ ಸಮಯದಲ್ಲಿ ವಿಚಾರಣಾಧೀನ ಕೈದಿಗಳಾದ ಅಹ್ಮದ್ ಖಾನ್, ಅಸ್ಪಾನ್ ಇರ್ಷಾದ್ ಅಹ್ಮದ್, ಹರ್ಶಿತ್ ಮತ್ತು ಅವಿನಾಶ್ ದೊಂಡ್ರೇ ನಡುವೆ ಗಲಾಟೆಯಾಗಿದೆ. ಈ ಬಗ್ಗೆ ವಿಚಾರಿಸಲು ಹೋದ ಜೈಲರ್‌ ಹಾಗೂ ಸಿಬ್ಬಂದಿ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದು, ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಜೈಲು ಅಧೀಕ್ಷಕಿ ದೀಪಾ ಅವರು ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಈ ಆರೋಪಿಗಳು ದರೋಡೆ, ಕೊಲೆ ಯತ್ನ, ಪೋಕ್ಸೊ ಪ್ರಕರಣಗಳ (POCSO Case) ಅಡಿಯಲ್ಲಿ ಜೈಲು ಸೇರಿದ್ದರು. ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆಯಾದ ನವವಿವಾಹಿತೆ ಆತ್ಮಹತ್ಯೆ – ವರದಕ್ಷಿಣೆ ಕಿರುಕುಳ ಆರೋಪ

Spread the loveಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮದುವೆಯಾಗಿ ವರ್ಷ ಕಳೆಯುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ