ಬೀದರ್: ದೀಪಾವಳಿ ಹಬ್ಬದ ಅಂಗವಾಗಿ ಸಿಡಿಸಿದ ಪಟಾಕಿ ಕಿಡಿಯಿಂದ ಅಗ್ನಿ ಅವಘಡ ಸಂಭವಿಸಿ 6 ಕಾರುಗಳು ಸುಟ್ಟು ಕರಕಲಾದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪೋಲಿಸ್ ಠಾಣೆ ಆವರಣದಲ್ಲಿ ನಡೆದಿದೆ.
ಪೊಲೀಸ್ ಠಾಣಾ ಆವರಣದಲ್ಲಿ ನಿಲ್ಲಿಸಿದ್ದ ಆರು ಕಾರುಗಳಿಗೆ ಬೆಂಕಿ ಹೊತ್ತಿಕೊಂಡು ಪರಿಣಾಮ, ಆರು ಕಾರುಗಳು ಸುಟ್ಟು ಕರಕಲಾಗಿವೆ. ಬೆಂಕಿ ಹೊತ್ತಿಕೊಂಡ ಕಾರುಗಳನ್ನು ವಿವಿಧ ಪ್ರಕರಣಗಳಲ್ಲಿ ಕಳೆದ ಎರಡು ವರ್ಷಗಳಿಂದ ಜಪ್ತಿ ಮಾಡ ಇರಿಸಲಾಗಿತ್ತು.
ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದ 6 ಕಾರುಗಳು ಸುಟ್ಟ ಹೋಗಿದ್ದು ಘಟನೆಯಿಂದ ಕೆಲಕಾಲ ಸುತ್ತ ಮುತ್ತಲಿನ ಪ್ರದೇಶದಲ್ಲಿ ಆತಂಕ ವಾತವರಣ ನಿರ್ಮಾಣವಾಗಿತ್ತು.
ವಿಷಯ ತಿಳಿದು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬರುವಷ್ಟರಲ್ಲಿ ಆರು ಕಾರುಗಳು ಬಹುತೇಕ ಸುಟ್ಟು ಹೋಗಿದ್ದವು.
ಹುಮ್ನಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಈ ಕುರಿತು ತೀವ್ರ ಪರಿಶೀಲನೆ ನಡೆಸಿದ್ದಾರೆ.
Laxmi News 24×7