ಬೆಳಗಾವಿ: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಹಾಗೂ ಕೆಎಲ್‌ಇ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.
ಬೈಲಹೊಂಗಲದಲ್ಲಿರುವ ದಿವಂಗತ ಶಿವಾನಂದ ಕೌಜಲಗಿ ಅವರ ನಿವಾಸಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ಪುತ್ರ ಹಾಗೂ ಶಾಸಕ ಮಹಾಂತೇಶ ಕೌಜಲಗಿ ಸೇರಿದಂತೆ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಹಾಗೂ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿ ಶಿವಾನಂದ ಕೌಜಲಗಿ ಅವರು ಶಿಕ್ಷಣ, ಸಮಾಜಸೇವೆ ಮತ್ತು ಸಾರ್ವಜನಿಕ ಜೀವನಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಜನಪರ ಸೇವೆ ಹಾಗೂ ಕಾರ್ಯಗಳು ಸದಾ ಸ್ಮರಣೀಯವಾಗಿರಲಿವೆ. ಅವರ ನಿಧನದಿಂದ ಸಾರ್ವಜನಿಕ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದರು.
Laxmi News 24×7