Breaking News

ದೀಪಾವಳಿ ಬಾಡೂಟಕ್ಕೆ ವನ್ಯಜೀವಿಗಳ ಬೇಟೆ – ಓರ್ವ ಆರೋಪಿ ಅರೆಸ್ಟ್‌, ಮೂವರು ಪರಾರಿ

Spread the love

ಚಿಕ್ಕಮಗಳೂರು: ದೀಪಾವಳಿ ಬಾಡೂಟಕ್ಕೆ ವನ್ಯಜೀವಿಗಳನ್ನು ಬೇಟೆಯಾಡಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೊಟ್ಟಿಗೆಹಾರ ಸಮೀಪದ ಬಿನ್ನಡಿ ಅರಣ್ಯ ಪ್ರದೇಶದಲ್ಲಿ ಬಂಧಿಸಿದ್ದಾರೆ. ಈ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಬಿನ್ನಡಿ ಗ್ರಾಮದ ರಮೇಶ್ ಬಂಧಿತ ಆರೋಪಿ. ಬಾಡೂಟಕ್ಕಾಗಿ ಕಡವೆ, ಕಾಡುಕುರಿಯನ್ನು ಬೇಟೆಯಾಡಿ, ರಮೇಶನ ಮನೆಯಲ್ಲಿ ನಾಲ್ವರು ಸೇರಿ ಮಾಂಸ ಕತ್ತರಿಸಿ ಪಾಲು ಮಾಡುತ್ತಿದ್ದರು. ಈ ವೇಳೆ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ದಾಳಿಯಾಗುತ್ತಿದ್ದಂತೆ ಮಹೇಂದ್ರ, ಪ್ರಕಾಶ್, ಮಲ್ಲಯ್ಯ ಪರಾರಿಯಾಗಿದ್ದಾರೆ.

ದಾಳಿಯ ವೇಳೆ ಎರಡು ನಾಡ ಬಂದೂಕುಗಳು, ವನ್ಯಜೀವಿ ಮಾಂಸವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಾಲ್ವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕಕಣ ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಅಡುಗೆ ಎಣ್ಣೆ ಮರುಬಳಕೆಗೆ ಸರ್ಕಾರ ನಿರ್ಬಂಧ – ಶೀಘ್ರದಲ್ಲೇ ಹೊಸ ಆ್ಯಪ್ ಬಿಡುಗಡೆ

Spread the loveಬೆಂಗಳೂರು: ಅಡುಗೆ ಎಣ್ಣೆ  ಮರುಬಳಕೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ  ದಿಟ್ಟ ಹೆಜ್ಜೆ ಇಟ್ಟಿದೆ. ಹೋಟೆಲ್‌ಗಳಲ್ಲಿ ಇನ್ಮುಂದೆ ಅಡುಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ