Breaking News

ಶಾಲೆಯ ಅಡುಗೆ ಕೋಣೆಗೆ ಬೆಂಕಿ ಹಚ್ಚಿ ಸಿಲಿಂಡರ್‌ ಸ್ಫೋಟಿಸಲು ಯತ್ನ – ಸ್ಥಳೀಯರಿಂದ ಪ್ರತಿಭಟನೆ

Spread the love

ಶಿವಮೊಗ್ಗ: ಸಾಗರ  ತಾಲೂಕಿನ ತುಮರಿ ಬಳಿಯ ಕೆರೆಕೈ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಗೆ ಕಿಡಿಗೇಡಿಗಳು ಬೆಂಕಿ (Fire) ಹಚ್ಚಿ ಸಿಲಿಂಡರ್‌ ಸ್ಫೋಟಿಸಲು ಯತ್ನಿಸಿದ ಆರೋಪ ಕೇಳಿಬಂದಿದೆ.

ತಡರಾತ್ರಿ ಶಾಲೆಯ ಅಡುಗೆ ಕೋಣೆಯ ಬಾಗಿಲ ಬಳಿ ಕಸ ಕಡ್ಡಿ ಹಾಕಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಶಾಲೆಯ ಆವರಣದಲ್ಲಿದ್ದ ಪೈಪ್ ಲೈನ್, ಗೇಟ್, ನೀರಿನ ಟ್ಯಾಂಕ್‌ಗೆ ಹಾನಿ ಮಾಡಿದ್ದಾರೆ. ಸಿಲಿಂಡರ್‌ ಸ್ಪೋಟಿಸುವ ಉದ್ದೇಶದಿಂದಲೇ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಿಡಿಗೇಡಿಗಳ ಕೃತ್ಯ ಖಂಡಿಸಿ ತುಮರಿ ಗ್ರಾ.ಪಂ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ್ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ (Protest) ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ -369ರಲ್ಲಿ ರಸ್ತೆ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಗಾಗ ಇಂತಹ ಕೃತ್ಯಗಳು ನಡೆಯುತ್ತಿವೆ. ಇತ್ತೀಚೆಗೆ ರಂಗಮಂದಿರಕ್ಕೂ ದುಷ್ಕರ್ಮಿಗಳು ಹಾನಿ ಮಾಡಿದ್ದರು. ಈ ಬಗ್ಗೆ ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಅಡುಗೆ ಎಣ್ಣೆ ಮರುಬಳಕೆಗೆ ಸರ್ಕಾರ ನಿರ್ಬಂಧ – ಶೀಘ್ರದಲ್ಲೇ ಹೊಸ ಆ್ಯಪ್ ಬಿಡುಗಡೆ

Spread the loveಬೆಂಗಳೂರು: ಅಡುಗೆ ಎಣ್ಣೆ  ಮರುಬಳಕೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ  ದಿಟ್ಟ ಹೆಜ್ಜೆ ಇಟ್ಟಿದೆ. ಹೋಟೆಲ್‌ಗಳಲ್ಲಿ ಇನ್ಮುಂದೆ ಅಡುಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ