Breaking News

ಬಸ್ಸಿನ ಮುಂಭಾಗದ ಚಕ್ರದ ನಟ್ ಕಿತ್ತಿ ಹೊಲಕ್ಕೆ ನುಗ್ಗಿದ ಬಸ್ – ತಪ್ಪಿದ ದುರಂತ

Spread the love

ಕೊಪ್ಪಳ: ಕನಕಗಿರಿ  ಮಾರ್ಗವಾಗಿ ಕೊಪ್ಪಳಕ್ಕೆ  ತೆರಳುತ್ತಿದ್ದ ಬಸ್ ಮುಂಭಾಗದ ಚಕ್ರದ ಕಮಾನ್ ಸ್ಪ್ರಿಂಗ್ ಪಟ್ಟಿಯ ನಟ್ ಕಿತ್ತಿದ ಪರಿಣಾಮ ಹೊಲಕ್ಕೆ ನುಗ್ಗಿ ದುರಂತವೊಂದು ತಪ್ಪಿರುವ ಘಟನೆ ಗಂಗಾನಾಳ ಹತ್ತಿರ ನಡೆದಿದೆ.

ಬಸ್‌ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಬೆಳೆಸುತ್ತಿದ್ದರು. ಬಸ್ ಗಂಗಾನಾಳ ಬಳಿ ಬರುತ್ತಿದ್ದಂತೆ ಏಕಾಏಕಿ ಮುಂಭಾಗದ ಚಕ್ರದ ಪಟ್ಟಿಯ ನಟ್ ಕಿತ್ತಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬಿಟ್ಟು ಪಕ್ಕದ ಹೊಲಕ್ಕೆ ನುಗ್ಗಿದೆ. ಬಸ್ ವೇಗ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಸ್ಥಳಕ್ಕೆ ಧಾವಿಸಿ, ಪ್ರಯಾಣಿಕರನ್ನು ಬಸ್‌ನಿಂದ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ.


Spread the love

About Laxminews 24x7

Check Also

ಅಡುಗೆ ಎಣ್ಣೆ ಮರುಬಳಕೆಗೆ ಸರ್ಕಾರ ನಿರ್ಬಂಧ – ಶೀಘ್ರದಲ್ಲೇ ಹೊಸ ಆ್ಯಪ್ ಬಿಡುಗಡೆ

Spread the loveಬೆಂಗಳೂರು: ಅಡುಗೆ ಎಣ್ಣೆ  ಮರುಬಳಕೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ  ದಿಟ್ಟ ಹೆಜ್ಜೆ ಇಟ್ಟಿದೆ. ಹೋಟೆಲ್‌ಗಳಲ್ಲಿ ಇನ್ಮುಂದೆ ಅಡುಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ