ಬೆಂಗಳೂರು: ನಗರಕ್ಕೆ ಪ್ರಧಾನಿ ಮೋದಿಯವರು ಆಗಮಿಸಿದ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘೋಷಣೆಯ ವಾರ್ ಆರಂಭವಾಗಿದೆ.
ಬಿಳೇಕಲ್ಲಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಎರಡೂ ಪಕ್ಷದ ಕಾರ್ಯಕರ್ತರು ಮುಖಾಮುಖಿ ಆಗಿದ್ದಾರೆ. ಈ ವೇಳೆ ಪರಸ್ಪರ ಘೋಷಣೆ ಕೂಗಿದ್ದಾರೆ. ಬಿಜೆಪಿಗರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಇತ್ತ ಡಿಕೆ ಡಿಕೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಘೋಷಣೆ ಕೂಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಅವರು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಜಿಗಣಿಯ ಪ್ರಶಾಂತಿ ಕುಟೀರಕ್ಕೆ ತೆರಳಿದ್ದಾರೆ. ಅಲ್ಲಿ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥೆ )ಯ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಲ್ಲಿ ಕಾರ್ಯಕ್ರಮದ ಬಳಿಕ ಗುಲಾಬಿ ಮಾರ್ಗದ ಮೆಟ್ರೋ ರೈಲು ಉದ್ಘಾಟನೆಗೆ ಆಗಮಿಸಲಿದ್ದಾರೆ.
ಗುಲಾಬಿ ಮಾರ್ಗದ ನಮ್ಮ ಮೆಟ್ರೋ ರೈಲು ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ತಾವರೆಕರೆ ಮೆಟ್ರೋ ನಿಲ್ದಾಣ ಅಂದರೆ ಎಸ್.ಜಿ ಪಾಳ್ಯ ನಿಲ್ದಾಣದಿಂದ ಕಾಳೇನ ಅಗ್ರಹಾರವರೆಗಿನ ಪಿಂಕ್ ಲೈನ್ ಮಾರ್ಗವನ್ನು ಮೋದಿ ಉದ್ಘಾಟಿಸಲಿದ್ದಾರೆ.
Laxmi News 24×7