Breaking News

ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಪೊಲೀಸ್ ಕಮಿಷನರ್: ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ

Spread the love

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನವೆಂಬರ್ 15ರಂದು ನಡೆಯಲಿರುವ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರದ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 15ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ.

ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನವೆಂಬರ್ 15ರ ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಅವಧಿಯಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ಸೇರುವುದನ್ನು ನಿರ್ಬಂಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಎಥೆನಾಲ್ ವಿಚಾರದಲ್ಲಿ ದೊಡ್ಡ ಫ್ರಾಡ್ ನಡೆದಿದೆ: ಸಚಿವ ಸಂತೋಷ್ ಲಾಡ್

Spread the loveಬೆಂಗಳೂರು: ಎಥೆನಾಲ್‌ ವಿಚಾರದಲ್ಲಿ ದೊಡ್ಡ ಫ್ರಾಡ್‌ ನಡೆದಿದೆ ಎಂದು ಸಚಿವ ಸಂತೋಷ್‌ ಲಾಡ್‌ ಗಂಭೀರ ಆರೋಪ ಮಾಡಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ