Breaking News

ಮುನವಳ್ಳಿಯಲ್ಲಿ ಕಾಂಗ್ರೆಸ್‌ಗೆ ಬಲ: ಇಬ್ಬರು ಪುರಸಭೆ ಸದಸ್ಯರು ಪಕ್ಷ ಸೇರ್ಪಡೆ

Spread the love

ಬೆಳಗಾವಿ: ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಬಿಜೆಪಿಯ ಓರ್ವ ಹಾಗೂ ಪಕ್ಷೇತರ ಓರ್ವ ಪುರಸಭೆ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸ್ಥಳೀಯ ನಾಯಕತ್ವದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪುರಸಭೆ ಸದಸ್ಯೆ ಮಮತಾಜ್ ಫ. ಚೋಪದಾರ್ ಹಾಗೂ ಪಕ್ಷೇತರ ಪುರಸಭೆ ಸದಸ್ಯೆ ಶಾಹಿದಾ ಮ. ಗಡಾದ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ತಿಳಿಸಲಾಗಿದೆ.

ನೂತನವಾಗಿ ಕಾಂಗ್ರೆಸ್ ಸೇರಿದ ಇಬ್ಬರೂ ಸದಸ್ಯರನ್ನು ಪಕ್ಷದ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿ, ಮುನವಳ್ಳಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಶ್ರಮಿಸುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಪುರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಎಥೆನಾಲ್ ವಿಚಾರದಲ್ಲಿ ದೊಡ್ಡ ಫ್ರಾಡ್ ನಡೆದಿದೆ: ಸಚಿವ ಸಂತೋಷ್ ಲಾಡ್

Spread the loveಬೆಂಗಳೂರು: ಎಥೆನಾಲ್‌ ವಿಚಾರದಲ್ಲಿ ದೊಡ್ಡ ಫ್ರಾಡ್‌ ನಡೆದಿದೆ ಎಂದು ಸಚಿವ ಸಂತೋಷ್‌ ಲಾಡ್‌ ಗಂಭೀರ ಆರೋಪ ಮಾಡಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ